ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ: ಜಿಲ್ಲಾಧಿಕಾರಿ ಡಾ.ಆನಂದ ಕೆ.
Arasu's contribution to social change is ever-memorable: Deputy Commissioner Dr. Anand K
ಲೋಕದರ್ಶನ ವರದಿ
ವಿಜಯಪುರ 20: ಶೋಷಿತ, ದಮನಿತ ಹಾಗೂ ದೀನ-ದಲಿತ ಸಮುದಾಯಗಳ ಸಮಗ್ರ ಏಳಿಗೆಗಾಗಿ ಡಿ. ದೇವರಾಜ ಅರಸು ಅವರು ರೂಪಿಸಿ ಜಾರಿಗೆ ತಂದ ಕ್ರಾಂತಿಕಾರಿ ಯೋಜನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಹೇಳಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಡಿ. ದೇವರಾಜ ಅರಸು ಅವರು ಕರ್ನಾಟಕ ಕಂಡ ಅತ್ಯಂತ ಧೀಮಂತ, ದೂರದೃಷ್ಟಿಯ ರಾಜಕಾರಣಿ ಅಷ್ಟೆ ಅಲ್ಲದೇ ಸಾಮಾಜಿಕ ಬದಲಾವಣೆಯ ಹರಿಕಾರರಾಗಿದ್ದರು. ಊಳುವವನೇ ಭೂ ಒಡೆಯ ಎಂಬ ಐತಿಹಾಸಿಕ ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಅನೇಕ ಭೂರಹಿತ ಗೇಣಿದಾರರಿಗೆ ಜಮೀನಿನ ಹಕ್ಕು ದೊರಕಿಸಿಕೊಟ್ಟು, ಸಮಾಜದಲ್ಲಿ ನೆಲೆಸಿದ್ದ ಅಸಮಾನತೆಯನ್ನು ಕೊನೆಗಾಣಿಸಿ ಆರ್ಥಿಕ ಸಮಾನತೆ ತರಲು ಶ್ರಮಿಸಿದರು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾತನಾಡಿ, ಅರಸು ಅವರು ಸಮಾಜದ ಹಿಂದುಳಿದವರಿಗೆ ಸಾಮಾಜಿಕವಾಗಿ ನ್ಯಾಯ ದೊರಕಿಸಿಕೊಡುವಲ್ಲಿ ಅಭೂತಪೂರ್ವ ಸುಧಾರಣೆಗಳನ್ನು ತಂದರು. ಜೀತಪದ್ಧತಿಯಂತಹ ಅಮಾನವೀಯ ಆಚರಣೆಗಳನ್ನು ಕಾನೂನುಬದ್ಧವಾಗಿ ತೊಡೆದುಹಾಕಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ವಸತಿ ನಿಲಯಗಳನ್ನು ಸ್ಥಾಪಿಸಿದರು. ಇಂದಿಗೂ ಸರ್ಕಾರದ ಈ ಸೌಲಭ್ಯಗಳನ್ನು ಸಮರ್ಥವಾಗಿ ಸದುಪಯೋಗಪಡಿಸಿಕೊಂಡು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದರು. ಅರಸು ಅವರ ತತ್ವ-ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 