ವಿವಾದಗಳ ಇತ್ಯರ್ಥಕ್ಕೆ ಮಧ್ಯಸ್ಥಿಕೆ ಕಾನೂನುಬದ್ಧವಾಗಿದೆ: ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್
Arbitration is legal for resolving disputes: High Court Justice R. Nataraj
ಬಳ್ಳಾರಿ 19: ಮಧ್ಯಸ್ಥಿಕೆಯನ್ನು ಕಾನೂನುಬದ್ಧಗೊಳಿಸಲಾಗಿದೆ. ವಿವಾದದಲ್ಲಿರುವ ಕಕ್ಷಿದಾರರ ನಡುವೆ ಸಂಧಾನ ಮೂಡಿಸುವಲ್ಲಿ ನ್ಯಾಯಾಧೀಶರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಯಾವ ಪ್ರಕರಣಗಳನ್ನು ಮಧ್ಯಸ್ಥಿಕೆಗೆ ಕಳುಹಿಸಬೇಕು ಎಂಬುದನ್ನು ನ್ಯಾಯಾಧೀಶರೇ ನಿರ್ಧರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಬಳ್ಳಾರಿ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಆರ್.ನಟರಾಜ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ ಹಾಗೂ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಜಂಟಿ ಆಶ್ರಯದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ನ್ಯಾಯಾಧೀಶರು ಹಾಗೂ ರೆಫರಲ್ ಜಡ್ಜ್ಗಳಿಗೆ ಮಧ್ಯಸ್ಥಿಕೆ ಕುರಿತು ಬಳ್ಳಾರಿಯ ತಾಳೂರು ರಸ್ತೆಯಲ್ಲಿರುವ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ 1 ನೇ ಮಹಡಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಒಂದು ದಿನದ ಪುನಶ್ಚೇತನ ತರಬೇತಿ ಕಾರ್ಯಾಗಾರವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತದಲ್ಲಿ ಮಧ್ಯಸ್ಥಿಕೆ ಅಥವಾ ಸಂಧಾನ ಎಂಬುದು ಹೊಸದೇನಲ್ಲ, ಮೊದಲಿನಿಂದಲೂ ವಿವಾದಗಳನ್ನು ಸಂಧಾನದ ಮೂಲಕವೇ ಬಗೆಹರಿಸಿಕೊಳ್ಳುವ ಸಂಪ್ರದಾಯವನ್ನು ಭಾರತವು ಹೊಂದಿದೆ. ಕುಟುಂಬದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದ ಹಿಡಿದು ಹಳ್ಳಿಯ ಪಂಚಾಯಿತಿಗಳವರೆಗೆ ನಮ್ಮ ದೈನಂದಿನ ಜೀವನದಲ್ಲಿ ಪೋಷಕರು ಮತ್ತು ಹಿರಿಯರು ಮಧ್ಯಸ್ಥಿಕೆ ವಹಿಸುತ್ತಾ ಬಂದಿದ್ದಾರೆ. ಇಂದು ನಾವು ಸಾಂಸ್ಥಿಕ ನ್ಯಾಯದಾನದ ವ್ಯವಸ್ಥೆಗೆ ಬದಲಾಗಿದ್ದರೂ, ನಮ್ಮ ಇತಿಹಾಸ ಮತ್ತು ಪುರಾಣಗಳಲ್ಲಿ ಮಧ್ಯಸ್ಥಿಕೆಗೆ ಅಗ್ರಸ್ಥಾನವಿದೆ ಎಂದರು. ಮಧ್ಯಸ್ಥಿಕೆಯು ಕೇವಲ ಪ್ರಕರಣಗಳನ್ನು ಇತ್ಯರ್ಥಪಡಿಸುವುದಿಲ್ಲ, ಬದಲಿಗೆ ಕರಗಿಹೋದ ಸಂಬಂಧಗಳನ್ನು ಬೆಸೆಯುತ್ತದೆ. ಉಭಯ ಪಕ್ಷಗಳ ನಡುವಿನ ದ್ವೇಷವನ್ನು ತಣಿಸಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು ದಾರಿ ಮಾಡಿಕೊಡುತ್ತದೆ ಎಂದು ಆಶಿಸುತ್ತಾ ತರಬೇತಿ ಶಿಬಿರಕ್ಕೆ ಶುಭ ಹಾರೈಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 