ಮನರಂಜನೆ

ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ವ್ಯವಸ್ಥೆ

ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಅಂತಿಮ ದರ್ಶನಕ್ಕೆ ವ್ಯವಸ್ಥೆ

  ಬೆಂಗಳೂರು, ಅ. 29 ನಟ ಪುನೀತ್ ರಾಜಕುಮಾರ್ ಸಾವಿನಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಲಕ್ಷಾಂತರ ಅಭಿಮಾನಿಗಳಿಗೆ ಈ ಸಾವಿನ ಸುದ್ದಿಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ.
 
ಅವರ ಅಂತಿಮ ದರ್ಶನ ಪಡೆಯಲು ಸದಾಶಿವನಗರದ ಅವರ ನಿವಾಸ ಹಾಗೂ ವಿಕ್ರಂ ಆಸ್ಪತ್ರೆಯ ಬಳಿ ಜನರು ಜಮಾಯಿಸಿದ್ದಾರೆ.  ಹೀಗಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ.
  ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಕ್ರೀಡಾಂಗಣ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.  ಸಂಜೆ 5 ಗಂಟೆ ವೇಳೆಗೆ ಅವರ ಪಾರ್ಥಿವ ದೇಹದ ಅಂತಿಮ ದರ್ಶನ ಸಿಗಲಿದೆ.

ಸುದ್ದಿ ಓದಿ