ಬಳ್ಳಾರಿ

ಹೋರಾಟ ಹತ್ತಿಕ್ಕಲು ವಿದ್ಯಾರ್ಥಿಗಳ ಬಂಧನ: ಸರಕಾರದ ನೀತಿ ಖಂಡನೀಯ

ಹೋರಾಟ ಹತ್ತಿಕ್ಕಲು  ವಿದ್ಯಾರ್ಥಿಗಳ ಬಂಧನ: ಸರಕಾರದ ನೀತಿ ಖಂಡನೀಯ

ಬಳ್ಳಾರಿ 16: ಯುಬಿಡಿಟಿ ಉಳಿಸಿ ಎಂದು ಎಐಡಿಎಸ್‌ಒ, ಯುಬಿಡಿಟಿ ವಿದ್ಯಾರ್ಥಿಗಳ ಹೋರಾಟ ಸಮಿತಿ ಸೇರಿದಂತೆ ಹಲವು ಪ್ರಗತಿಪರ ಸಂಘಟನೆಗಳ ಮೂಲಕ ದಾವಣಗೆರೆ ಬಂದ್ ಗೆ ಕರೆ ನೀಡಲಾಗಿತ್ತು. 

ಇದರ ಭಾಗವಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ಶಶಿಕಲಾ, ಎಐಡಿಎಸ್‌ಒ ದಾವಣಗೆರೆ ಜಿಲ್ಲಾ ಕಾರ್ಯದರ್ಶಿ ಸುಮನ್, ಹಾಗೂ ಹಲವು ರಾಜ್ಯ ನಾಯಕರನ್ನೊಳಗೊಂಡಂತೆ ಯುಬಿಡಿಟಿ ವಿದ್ಯಾರ್ಥಿ ಹೋರಾಟ ಸಮಿತಿಯ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ರಾಜ್ಯ ಸರಕಾರದ ಈ ನಡೆ ಅತ್ಯಂತ ಖಂಡನೀಯ ಹಾಗೂ ವಿದ್ಯಾರ್ಥಿ ವಿರೋಧಿಯಾಗಿದೆ. 

ಒಂದೆಡೆ ಸರಕಾರವೇ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡುತ್ತದೆ. ಇನ್ನೊಂದೆಡೆ ಅದನ್ನು ವಿರೋಧಿಸಿದ ವಿದ್ಯಾರ್ಥಿಗಳನ್ನು ಬಂಧಿಸಲಾಗುತ್ತದೆ. ಇದು ರಾಜ್ಯ ಸರಕಾರ ವಿದ್ಯಾರ್ಥಿಗಳ ಹೋರಾಟದ ಹಕ್ಕಿನ ಮೇಲೆ ಮಾಡುತ್ತಿರುವ ಪ್ರಹಾರವಾಗಿದೆ. ಈ ಕೂಡಲೇ ಬಂಧಿತರನ್ನು ಬಿಡುಗಡೆಗೊಳಿಸಬೇಕು ಎಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ. ಕೆಎಸ್‌ಆರ್‌ಟಿಸಿ 


ಸುದ್ದಿ ಓದಿ