ನೈಪುಣ್ಯತೆ ಇಲ್ಲದೆ ಕಲೆ ಅಪೂರ್ಣ : ಡಾ. ಅಮರೇಶ್ ನುಗಡೋಣಿ
Art is incomplete without skill: Dr. Amaresh Nugadoni
ಬಳ್ಳಾರಿ 11: ನಗರದಲ್ಲಿ ಯಾವುದೇ ಕಲಾ ಪ್ರಕಾರದಲ್ಲಾದರೂ ಸಂಪೂರ್ಣ ಮನಸ್ಸು ತೊಡಗಿಸಿಕೊಂಡು ನೈಪುಣ್ಯತೆ ಸಾಧಿಸಬೇಕು ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಮರೇಶ್ ನುಗಡೋಣಿ ಅಭಿಪ್ರಾಯಪಟ್ಟರು.ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗ ಮಂದಿರದಲ್ಲಿ ಬೆಳಕು ಸಾಹಿತ್ಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಗಡಿನಾಡು ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕಲೆ ಫ್ಯಾಷನ್ ಆಗದೆ ಕಲಾತ್ಮಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.“ಎಷ್ಟು ಬರೆದೆವು ಎಂಬುದಕ್ಕಿಂತ, ಅದು ಸಮಾಜಕ್ಕೆ ಎಷ್ಟು ಕಾಲ ಪ್ರಸ್ತುತವಾಗಿರುತ್ತದೆ ಎಂಬುದು ಮುಖ್ಯ. ಸಾಹಿತ್ಯವು ಲೋಕದ ಅನಿಷ್ಟತೆಯನ್ನು ಪ್ರಶ್ನಿಸುವಂತಿರಬೇಕು. ಶಿವಶರಣರ ವಚನಗಳಲ್ಲಿ ಅಂತಹ ಮೌಲ್ಯಗಳನ್ನು ಕಾಣಬಹುದು” ಎಂದು ಹೇಳಿದರು.
ಸಮಾರಂಭಗಳಲ್ಲಿ ಸನ್ಮಾನ ಪಡೆಯುವುದೇ ಮುಖ್ಯವಲ್ಲ, ಸಮಾಜದಲ್ಲಿ ದೀರ್ಘಕಾಲ ಗುರುತಿಸಿಕೊಳ್ಳುವಂತಹ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದ ಅವರು, ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ, ಜನಪ್ರತಿನಿಧಿಗಳು ಮಾತ್ರವಲ್ಲದೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿವೃತ್ತ ಉಪ ನಿರ್ದೇಶಕ ಚೋರನೂರು ಕೊಟ್ರ್ಪ ಮಾತನಾಡಿ, ಗಡಿ ಎಂಬುದು ಭೌಗೋಳಿಕವಾಗಿದ್ದರೂ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಯಾವುದೇ ಗಡಿ ಇಲ್ಲ ಎಂದರು.ಸಮ್ಮೇಳನದ ಅಧ್ಯಕ್ಷತೆಯನ್ನು ಯಲ್ಲನಗೌಡ ಶಂಕರಬಂಡೆ ವಹಿಸಿದ್ದರು. ಟ್ರಸ್ಟ್ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ಅನುದಾನವಿಲ್ಲದೆ ದಾನಿಗಳ ಸಹಕಾರದಿಂದಲೇ ಸಂಸ್ಥೆ ಕಲಾವಿದರ ಪ್ರೋತ್ಸಾಹ ಕಾರ್ಯ ಮುಂದುವರಿಸುತ್ತಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಬೆಳಕು ಸಂಸ್ಥೆಯ ಗೌರವ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಹಿರೇಮಠ ಅವರು ಗೀತಾಮೃತ ಕೃತಿಯನ್ನು ಲೋಕಾರೆ್ಣ ಮಾಡಿದರು.ಕಾರ್ಯಕ್ರಮದಲ್ಲಿ ಅನೇಕ ಗಣ್ಯರಿಗೆ ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ನಡೆಯಿತು. ಜೊತೆಗೆ ಕವಿಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 