ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿ ಅಂತ್ಯ ಸಂಸ್ಕಾರ
ಪೋತಗಲ್, ಸೆಪ್ಟೆಂಬರ್ 18: ಗುರುವಾರ ರಾತ್ರಿ ನಿಧನರಾದ ಬಿಜೆಪಿಯ ಹಿರಿಯ ಮುಖಂಡ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಪಾರ್ಥೀವ ಶರೀರದ ಅಂತ್ಯ ಸಂಸ್ಕಾರ ಅವರ ಹುಟ್ಟೂರಿನಲ್ಲಿ ನೆರವೇರಿತು.
ಕಳೆದ ಎರಡು ವಾರಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಶೋಕ್ ಗಸ್ತಿಯವರ ಅಂತ್ಯಕ್ರಿಯೆ ರಾಯಚೂರು ಜಿಲ್ಲೆಯ ಪೋತಗಲ್ನಲ್ಲಿ ನಡೆಯಿತು.
ಸ್ಥಳೀಯ ಶಾಸಕ ಶಿವರಾಜ್ ಪಾಟೀಲ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರಕಾಶ್ ನಿಕಮ್ ಮತ್ತಿತರರು ಹಾಜರಿದ್ದರು. ಜಿಲ್ಲಾಧಿಕಾರಿ ವೆಂಕಟೇಶ್ಕುಮಾರ್ ಕೋವಿಡ್ ನಿಯಮದಂತೆ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗಿದೆ ಎಂದು ತಿಳಿಸಿದ್ದಾರೆ.