ಅಶೋಕನ ಶಾಸನಗಳು ಭಾರತೀಯ ಸಂಸ್ಕೃತಿಯ ಪ್ರತಿಬಿಂಬಗಳು
Ashoka's edicts are reflections of Indian culture
ಲೋಕದರ್ಶನ ವರದಿ
ಹಾವೇರಿ 25: ಮೌರ್ಯ ಚಕ್ರವರ್ತಿ ಅಶೋಕನ ಶಾಸನಗಳೇ ಭಾರತದಲ್ಲಿ ಕಂಡುಬಂದಿರುವ ಮೊದಲ ಶಾಸನಗಳಾಗಿದ್ದು, ಬ್ರಾಹ್ಮೀ ಲಿಪಿಯಲ್ಲಿ ಬರೆಯಲ್ಪಟ್ಟಿರುವ ಇವು ವಿಶಿಷ್ಟವಾಗಿವೆ. ದಯೆ, ದಾನ, ಧರ್ಮ, ಗುರು ಹಿರಿಯರಲ್ಲಿ ಗೌರವ ಮುಂತಾದ ಮಾನವೀಯ ಮೌಲ್ಯಗಳನ್ನು ಸಾರುವ ಅಶೋಕನ ಶಾಸನಗಳು ಭಾರತೀಯ ಸಂಸ್ಕೃತಿಯ ಪ್ರತಿಬಿಂಬಗಳಾಗಿವೆ ಎಂಬುದಾಗಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಡಾ. ವೀರೇಶ ಡಿ. ಅಭಿಪ್ರಾಯ ಪಟ್ಟರು. ಅವರು ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳೀಕೇರಿ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ಪರಂಪರೆ ಕೂಟವು ಜಂಟಿಯಾಗಿ ಆಯೋಜಿಸಿದ್ದ "ಮೌರ್ಯ ಚಕ್ರವರ್ತಿ ಅಶೋಕನ ಶಾಸನಗಳು" ಎಂಬ ವಿಷಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಭಾರತವಲ್ಲದೇ ಇಂದಿನ ಪಾಕಿಸ್ತಾನ ಹಾಗೂ ಅಫಘಾನಿಸ್ಥಾನಗಳಲ್ಲಿಯೂ ಅಶೋಕನ ಶಾಸನಗಳು ಕಂಡುಬಂದಿರುವುದು ಪ್ರಾಚೀನ ಮೌರ್ಯ ಸಾಮ್ರಾಜ್ಯವು ಅಲ್ಲಯವರೆಗೂ ವಿಸ್ತಾರಗೊಂಡಿರುವುದಕ್ಕೆ ನಿದರ್ಶನಗಳಾಗಿವೆ ಎಂಬುದಾಗಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಬ್ರಾಹ್ಮಿ ಲಿಪಿಯನ್ನು ಕುರಿತು ವಿವರ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಮಂಜುನಾಥ ಹೊಳ್ಳಿಯವರ ವಿದ್ಯಾರ್ಥಿಗಳು ಎಲ್ಲ ಮೂಲಗಳಿಂದ ವಿಷಯವನ್ನು ಗೃಹಿಸಿ ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಕರೆ ನೀಡಿದರು. ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶಿವಯೋಗಿ ಕೋರಿಶೆಟ್ಟರ ಉಪಸ್ಥಿತರಿದ್ದರು. ಡಾ. ಶರಣಪ್ಪ ಜಗ್ಗಲ ಅತಿಥಿಗಳನ್ನು ಸ್ವಾಗತಿಸಿ ಪರಿಚಯಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 