ಮುಂದಗೋಡ

ವಿಧಾನಸಭಾ ಚುನಾವಣೆ: ಅಧಿಕಾರಿಗಳ ಸಭೆ

ವಿಧಾನಸಭಾ ಚುನಾವಣೆ: ಅಧಿಕಾರಿಗಳ ಸಭೆ

ಮುಂಡಗೋಡ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಿಲ್ಲಾ ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪನ ಸೊಲಗದ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಕ್ಷೇತ್ರದ ಅಧಿಕಾರಿಗಳು, ಪ್ಲ್ಯಾಯಿಂಗ್ ಸ್ಕಾಡ್, ಸೆಕ್ಟರ್ ಅಧಿಕಾರಿ ಹಾಗೂ ಅಧಿಕಾರಿಗಳ ಸಭೆ ನಡೆಯಿತು.   

ವಿಧಾನಸಭಾ ಚುನಾವಣೆ ಬಗ್ಗೆ ಚುನಾವಣಾ ಆಯೋಗದಿಂದ ವಿಡಿಯೋ ಸಂವಾದದ ಮೂಲಕ ಅಧಿಕಾರಿಗಳಿಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಖರ್ಚು-ವೆಚ್ಚಗಳ ಬಗ್ಗೆ ಹಾಗೂ ಚುನಾವಣೆ ನಡೆಸುವ ಬಗ್ಗೆ ಸುದೀರ್ಘ ತರಬೇತಿ ನೀಡಲಾಯಿತು. ಚುನಾವಣಾಧಿಕಾರಿ ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಅಜ್ಜಪ್ಪನ ಸೊಲಗದ ಚುನಾವಣೆ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಪ್ಲ್ಯಾಯಿಂಗ್ ಸ್ಕಾಡ್ ಹಾಗೂ ಸೆಕ್ಟರ್ ಅಧಿಕಾರಿಗಳ ಜೊತೆ ಚುನಾವಣೆ ಬಗ್ಗೆ ಚರ್ಚಿಸಲಾಯಿತು. ತಮ್ಮ ವ್ಯಾಪ್ತಿಯಲ್ಲಿ ಬರುವ ಸೆಕ್ಟರ್‌ಗಳಲ್ಲಿ ಸರಿಯಾಗಿ ಕರ್ತವ್ಯ ನಿರ್ವಹಿಸಿ ಚುನಾವಣೆಯನ್ನು ಯಾವುದೆ ಅಡೆತಡೆ ಇಲ್ಲದೆ ಎಲ್ಲರೂ ಸೇರಿ ಯಶಸ್ವಿಗೊಳಿಸೋಣ ಎಂದು ಅಧಿಕಾರಿಗಳಿಗೆ ತಿಳಿಸಿದರು. ಮುಂಡಗೋಡ ಮತ್ತು ಯಲ್ಲಾಪುರ ತಾಲೂಕಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. 


ಸುದ್ದಿ ಓದಿ