ಯಡೂರ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ
At the Satish Sugar Award
ಲೋಕದರ್ಶನ ವರದಿ
ಸತೀಶ ಶುಗರ್ ಅವಾರ್ಡ್‌ನಲ್ಲಿ
ಮಾಂಜರಿ 29: ಸತೀಶ ಶುಗರ ಅವಾರ್ಡನಲ್ಲಿ ಪ್ರಾಥಮಿಕ ಶಾಲಾ ವಿಭಾಗದ ಸಮೂಹ ನೃತ್ಯ ಸ್ಪರ್ಧೆಯಲ್ಲಿ ಚಿಕ್ಕೋಡಿ ತಾಲೂಕಿನ ಹೊಸಯಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು 3 ನೇ ಸ್ಥಾನ ಪಡೆದು ಅಮೋಘವಾದ ಸಾಧನೆಯನ್ನು ಮಾಡಿದ್ದಾರೆ.
ನಿನ್ನೆ ಸಾಯಂಕಾಲ ಚಿಕ್ಕೋಡಿ ಪಟ್ಟಣದ ಕಿವಡ್ ಮೈದಾನದಲ್ಲಿ ಸತೀಶ ಶುಗರ ಅವಾ??9ನಗ್ರ್ಯಾಂಡ್ ಫಿನಾಲೆಯಲ್ಲಿ ಯಡೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಮೂಹ ನೃತ್ಯ ಸ್ಪರ್ಧೆಯಲ್ಲಿ 3 ನೇ ಸ್ಥಾನ ತಂದು ಯಡೂರ ಗ್ರಾಮದ ಕೀರ್ತಿ ಹೆಚ್ಚಿಸಿದ್ದಾರೆ. ಅದಲ್ಲದೇ 30 ಸಾವಿರ ನಗದು ಬಹುಮಾನ ಆಕರ್ಷಕ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ.
ಸಂಸದೆ ಪ್ರಿಯಾಂಕಾ ಜಾರಕಿಹೊಳಿ,ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ರಾಹುಲ್ ಜಾರಕಿಹೊಳಿ,ಅಪ್ಪಾಸಾಹೇಬ ಕುಲಗೂಡೆ,ಕಾಂಗ್ರೇಸ ಮುಖಂಡ ಮಹಾವೀರ ಮೊಹಿತೆ,ಬುಡಾ ಅಧ್ಯಕ್ಷ ಲಕ್ಷ್ಮಣ ರಾವ ಚಿಂಗಳೆ ಸೇರಿದಂತೆ ವಿವಿಧ ಗಣ್ಯರು ಸೇರಿಕೊಂಡು ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಿದರು.
ವಿದ್ಯಾರ್ಥಿಗಳ ಸಾಧನೆಗೆ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಪಾಲಕರು, ಶಿಕ್ಷಕರು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 