ಅಥಣಿ ಬಳಿ ಶಾಲಾ ಬಸ್ ಕಂಟೇನರ್ ಲಾರಿ ನಡುವೆ ಅಪಘಾತ : ಇಬ್ಬರು ಚಾಲಕರ ಸಾವು : 20 ವಿದ್ಯಾರ್ಥಿಗಳಿಗೆ ಗಾಯ
ಬೆಳಗಾವಿ, ಆ, 20 : ಶಾಲಾ ವಿದ್ಯಾತ್ಲರ್ಥಿಗಳಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರೂ ಚಾಲಕರು ಮೃತಪಟ್ಟ ಘಟನೆ ಜಿಲ್ಲೆಯ ಅಥಣಿ ನಗರದ ಹೊರವಲಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಜಿಲ್ಲೆಯ ಅಥಣಿಯ ಖಾಸಗಿ ಶಾಲಾ ಮಕ್ಕಳಿದ್ದ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಶನಿವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಶಾಲಾ ಬಸ್ ನಲ್ಲಿದ್ದ 20 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿವೆ ಎಂದು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಸಂಜೀವ ಪಾಟೀಲ ತಿಳಿಸಿದ್ದಾರೆ.
ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಅಥಣಿ ಠಾಣೆಯ ಲ್ಲಿ ಪ್ರಕರಣ ದಾಖಲಾಗಿದೆ.