ಅಥ್ಲೆಟಿಕ್ಸ್ : ಎಸ್.ಕೆ.ಜಿ.ಜಿ. ವಿದ್ಯಾರ್ಥಿನಿಯರು ರಾಜ್ಯಮಟ್ಟಕ್ಕೆ ಆಯ್ಕೆ
ಲೋಕದರ್ಶನ ವರದಿ
ಹೂವಿನಹಡಗಲಿ: 09- ಹರಪನಳ್ಳಿಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪಟ್ಟಣದ ಎಸ್.ಕೆ.ಜಿ.ಜಿ. ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿವಿಧ ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಪ್ರಾಚಾರ್ಯ ಎ ಕೊಟ್ರಗೌಡ ತಿಳಿಸಿದರು.
ಆಶಾ ಅಂಗಡಿ ಭರ್ಚಿ ಎಸೆತ(ಪ್ರಥಮ) ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ ಗಮನ ಸೆಳೆದಿದ್ದಾರೆ. ಸೃಷ್ಟಿ ದೇವರಮನಿ ಉದ್ದ ಜಿಗಿತ (ಪ್ರಥಮ) ಸ್ಥಾನ ಮಂಜುಳಾ ಗುಂಡು ಎಸೆತ (ದ್ವಿತೀಯ) ಅಭಿ ಎಸ್. 3,000 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿನಿಯರ ಈ ಸಾಧನೆಯು ಅವರ ನಿರಂತರ ಅಭ್ಯಾಸ, ಕ್ರೀಡೆಯ ಬಗೆಗಿನ ಆಸಕ್ತಿ ಮತ್ತು ಸ್ಪರ್ಧಾತ್ಮಕ ಮನೋಭಾವವನ್ನು ಪ್ರತಿಬಿಂಬಿಸಿದೆ.
ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿರುವ ವಿದ್ಯಾರ್ಥಿನಿಯರು ಮುಂಬರುವ ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ತಮ್ಮ ಪ್ರತಿಭೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನಾವರಣಗೊಳಿಸುವ ನೀರೀಕ್ಷೆ ವ್ಯಕ್ತವಾಗಿದೆ.ವಿದ್ಯಾರ್ಥಿನಿಯರ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಕೊಟ್ರಗೌಡ, ಕ್ರೀಡಾ ಕಾರ್ಯದರ್ಶಿ ದುಷ್ಯಂತ, ಉಪನ್ಯಾಸಕ ಬಸೆಟ್ಟಿ ಪ್ರಕಾಶ್ ಸೇರಿದಂತೆ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ವಿದ್ಯಾರ್ಥಿನಿಯರ ಕ್ರೀಡಾ ಸಾಧನೆಗೆ ಹರ್ಷ ವ್ಯಕ್ತಪಡಿಸಿರುವ ಅವರು, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಗೌರವ ತರಲಿ ಎಂದು ಶುಭ ಹಾರೈಸಿದ್ದಾರೆ.