ನಗರದ ವಿವಿಧ ಅಂಗಡಿಗಳ ಮೇಲೆ ದಾಳಿ
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಮಂಗಳವಾರ ಸವಣೂರ ನಗರದ ಆಯ್ದ 12 ಅಂಗಡಿಗಳ ಮೇಲೆ ದಾಳಿ ನಡೆಸಿ ರೂ.1450 ದಂಡ ವಸೂಲಿ ಮಾಡಿದೆ.
ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿ ಕಲಂ-4ರಡಿಯಲ್ಲಿ 800 ರೂ. ಹಾಗೂ ಕಲಂ 6ಬಿ ಅಡಿಯಲ್ಲಿ ರೂ.6500 ಸೇರಿ 1450 ರೂ. ದಂಡ ವಸೂಲಿ ಮಾಡಲಾಗಿದೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಡಾ.ಸಂತೋಷ ವಿ.ದಡ್ಡಿ ಹಾಗೂ ದಾದಾಪೀರ ಹುಲಿಕಟ್ಟಿ, ನಗರ ಪೊಲೀಸ್ ಠಾಣೆಯ ಬಿ.ಎಫ್.ಕಡಕೋಳ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಪಿ.ಎಲ್.ಪೂಜಾ, ಮಹೇಶ ಕುಮ್ಮೂರ ಇತತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 