ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಪಾನ್ಶಾಪ್ಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ
ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ
ಹಾವೇರಿ 26:ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ರಾಣೇಬೆನ್ನೂರ ನಗರದ ವಿವಿಧ ಧೂಮಪಾನ ಅಡ್ಡಾಗಳು ಹಾಗೂ ಪಾನ್ಶಾಪ್ಗಳ ಅಂಗಡಿಗಳ ಮೇಲೆ ದಾಳಿ ನಡೆಸಿ ದಂಡ ವಸೂಲಿ ಮಾಡಿದೆ.
ಪರವಾನಿಗೆ ಪಡೆಯದೇ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕರಿಗೆ ಹಾಗೂ ಕಾಯ್ದೆ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ, ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-6ಬಿ ಅಡಿಯಲ್ಲಿ 09 ಪ್ರಕರಣಗಳಿಂದ ದಂಡ ವಸೂಲಿ ಮಾಡಲಾಗಿದೆ. ಪರೋಕ್ಷವಾಗಿ ತಂಬಾಕು ಜಾಹೀರಾತು ಮಾಡುವ ಐದು ಫಲಕಗಳನ್ನು ತೆರವುಗೊಳಿಸಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 