ಲೋಕದರ್ಶನ ವರದಿ
ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ: ದುಷ್ಪರಿಣಾಮಗಳ ಅರಿವು
ಬೆಳಗಾವಿ 16: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ ಏ.16ರಂದು ಜಿಲ್ಲೆಯ ಅಜಮನಗರನ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದನ್ವಯ ದಾಳಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.
ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 28 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು. ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರೀಣಾಮದ ಕುರಿತು ಅರಿವು ಮೂಡಿಸಲಾಯಿತು.
ಸದರಿ ದಾಳಿಯಲ್ಲಿ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಹಾಗೂ ಸಮಾಜ ಕಾರ್ಯಕರ್ತೆ ಕವಿತಾ ರಾಜನ್ನವರ, ಪೊಲೀಸ್ ಇಲಾಖೆಯ ಎಮ್.ಐ. ಹಣಬರ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಸಮೀಕ್ಷಾ/ತಂಬಾಕು ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****
ಉಚಿತ ಬಾಸ್ಕೇಟ್ಬಾಲ್ ಕ್ರೀಡಾ ತರಬೇತಿ ಶಿಬಿರ ಏ.21 ರಿಂದ
ಬೆಳಗಾವಿ, ಏ.16: ಬಾಸ್ಕೇಟ್ಬಾಲ್ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ 18 ವರ್ಷ ವಯಸ್ಸಿನೊಳಗಿನ ಬಾಲಕ/ಬಾಲಕಿಯರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಏ.21 ರಿಂದ 21 ದಿನಗಳ ಕಾಲ ನಗರದ ಜಿಲ್ಲಾ ಕ್ರೀಡಾಂಗಣದ ಬಾಸ್ಕೇಟ್ಬಾಲ್ ಅಂಕಣದಲ್ಲಿ ಉಚಿತ ಬಾಸ್ಕೇಟ್ಬಾಲ್ ಕ್ರೀಡಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8317456301 ಗೆ ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****
ಆಸಕ್ತರಿಂದ ಅಭಿವ್ಯಕ್ತಿಗಾಗಿ ಆಹ್ವಾನ
ಬೆಳಗಾವಿ 16: ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ ಅಭಿಯಾನ 2.0 ಯೋಜನೆಯ ಅಡಿಯಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂಪರ್ಕ (ಋಅ) ಚಟುವಟಿಕೆ ಕೈಗೊಳ್ಳಲು ಸ್ವಸಹಾಯ ಗುಂಪುಗಳ (ಖಊಉ) ಸದಸ್ಯರನ್ನು ಅಠಟಣಟಿಣಥಿ ಒಠಟದಜಡಿ ಎಂಬುದಾಗಿ ನೇಮಕ ಮಾಡಿಕೊಳ್ಳಲು ಆಸಕ್ತರಿಂದ ಅಭಿವ್ಯಕ್ತಿ ಆಹ್ವಾನಿಸಲಾಗಿದೆ.
ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಆಂಙ-ಓಗಐಒ ಯೋಜನೆಯಡಿ ನೋಂದಾಯಿತ ಸ್ವ-ಸಹಾಯ ಗುಂಪುಗಳ ಸದಸ್ಯರಾಗಿದ್ದು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, ಕನ್ನಡದಲ್ಲಿ ಒದಲು ಮತ್ತು ಬರೆಯಲು ಹಾಗೂ ಗಣಕಯಂತ್ರದಲ್ಲಿ ಒ.ಖ ಓಈಈಋಇ ಅಪ್ಲಿಕೇಶನನಲ್ಲಿ ಕೆಲಸ ಮಾಡಲು ಸಾಮರ್ಥ್ಯ ಇರುವವರು ಈ ಯೋಜನೆಯಡಿ ಅಭಿವ್ಯಕ್ತಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆಗಳನ್ನು ತಿತಿತಿ.ಟಞಣಛಛಚಿಟಟಣಠಟಿ.ಟಡಿಛಿ.ರಠ.ಟಿ ಜಾಲತಾಣದಲ್ಲಿ ಪಡೆಯಬಹುದು. ಅರ್ಜಿಗಳನ್ನು ಏ.25 2025 ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08288-274046 ಗೆ ಸಂಪರ್ಕಿಸಬಹುದಾಗಿದೆ ಎಂದು ಎಂ.ಕೆ. ಹುಬ್ಬಳ್ಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*****
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಬೆಳಗಾವಿ 16: ಬೆಳಗಾವಿ ಜಿಲ್ಲಾ ವ್ಯಾಪ್ತಿಯ 14 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದ್ಕೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಆನ್ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಸ್ಥಳೀಯ ಮಹಿಳಾ ಅಭ್ಯರ್ಥಿಗಳು ವೆಬ್ಸೈಟ್ ಣಣಠಿ://ಞಚಿಡಿಟಿಜಟಚಿಞಚಿಠಜ.ಞಚಿಡಿ.ಟಿಛಿ.ಟಿ/ಚಿಛಛಿಜ/ ದಲ್ಲಿ ಸಲ್ಲಿಸಬಹುದಾಗಿದೆ. ಮೇ. 16, 2025ರ ಒಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾ ಕಚೇರಿಗಳನ್ನು ಅಥವಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಾಜಿ ನಗರ ಬೆಳಗಾವಿ ಇವರ ಕಛೇರಿ ದೂರವಾಣಿ ಸಂಖ್ಯೆ: 0831-2407236 ಕ್ಕೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.