ಲೋಕದರ್ಶನ ವರದಿ
ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ: ದುಷ್ಪರೀಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು
ಬೆಳಗಾವಿ 25: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಸಹಯೋಗದೊಂದಿಗೆ ಶುಕ್ರವಾರ (ಏ.25) ಗೋಕಾಕ ಹಾಗೂ ಘಟಪ್ರಭಾ ನಗರದಲ್ಲಿ ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದನ್ವಯ ದಾಳಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.
ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 32 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು. ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರೀಣಾಮದ ಕುರಿತು ಅರಿವು ಮೂಡಿಸಲಾಯಿತು.
ಸದರಿ ದಾಳಿಯಲ್ಲಿ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಸಲಹೆಗಾರರಾದ ಡಾ.ಶ್ವೇತಾ ಪಾಟೀಲ, ಸಮಾಜ ಕಾರ್ಯಕರ್ತೆ ಕವಿತಾ ರಾಜನ್ನವರ, ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಜಿಲ್ಲಾ ಸಮೀಕ್ಷಾ/ತಂಬಾಕು ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.