ಆಸ್ಟ್ರೇಲಿಯಾ ಓಪನ್ : ಕ್ವಾರ್ಟರ್ ಪೈನಲ್ ಪ್ರವೇಶಿಸಿದ ಹಲೆಪ್, ಥೀಮ್
ಮೆಲ್ಬೋರ್ನ್, ಜ 27, ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಓಪನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ವಿಶ್ವದ ಮೂರನೇ ಶ್ರೇಯಾಂಕಿತೆ ಸಿಮೋನಾ ಹಲೆಪ್ ಅವರು ಕ್ವಾರ್ಟರ್ ಪೈನಲ್ಸ್ ಪ್ರವೇಶಿಸಿದ್ದಾರೆ.ಸೋಮವಾರ ನಡೆದ ಮಹಿಳೆಯರ ಸಿಂಗಲ್ಸ್ ಅಂತಿಮ 16ರ ಹಂತದ ಪಂದ್ಯದಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ ಸಿಮೋನಾ ಹಲೆಪ್ ಅವರು ಎಲಿಸ್ ಮರ್ಟೆನ್ಸ್ ವಿರುದ್ಧ 6-4, 6-4 ಅಂತರದಲ್ಲಿ ಗೆದ್ದು ಎಂಟರ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ. ಆ ಮೂಲಕ ವರ್ಷದ ಮೊದಲ ಗ್ರ್ಯಾನ್ ಸ್ಲ್ಯಾಮ್ ಗೆಲ್ಲುವ ಹಾದಿಯತ್ತ ಹೆಜ್ಜೆ ಇಟ್ಟಿದ್ದಾರೆ. ಎರಡು ಗ್ರ್ಯಾನ್ ವಿಜೇತೆ ಹಲೆಪ್ ಅವರ ಪಾಲಿಗೆ ಆಸ್ಟ್ರೇಲಿಯಾ ಓಪನ್ ಕ್ವಾರ್ಟರ್ ಪೈನಲ್ ತಲುಪಿರುವುದು ಇದು ನಾಲ್ಕನೇ ಬಾರಿಯಾಗಿದೆ. ಪುರುಷರ ಸಿಂಗಲ್ಸ್ ಪ್ರೀ ಕ್ವಾರ್ಟರ್ ಪೈನಲ್ ಹಣಾಹಣಿಯಲ್ಲಿ ಡೊಮಿನಿಚ್ ಥೀಮ್ 6-2, 6-4, 6-4 ಅಂತರದಲ್ಲಿ ಮೊನ್ಫಿಲ್ಸ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ ಪ್ರವೇಶ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 