ಗಂಗಮ್ಮ ಬೊಮ್ಮಾಯಿ ಟ್ರಸ್ಟ್‌ನಿಂದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ: ಮಲ್ಲಿಕಾರ್ಜುನ ಬೊಮ್ಮಾಯಿ
ಶಿಗ್ಗಾವಿ 27: ಶ್ರೀಮತಿ ಗಂಗಮ್ಮ ಸೋ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಸೆ. 28ರಂದು ಗುರುವಾರ ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಶ್ರೀನಿವಾಸ ಗಾರ್ಡನ್‌ನಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಗ್ರಂಥಲೋಕಾರ್ಪಣೆ ಸಮಾರಂಭ ಏರ್ಪಡಿಸಲಾಗಿದೆ ಎಂದು ಟ್ರಸ್ಟ್ ಉಪಾಧ್ಯಕ್ಷ ಮಲ್ಲಿಕಾರ್ಜುನ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಪ್ರಶಸ್ತಿ ಪ್ರಧಾನ ನೇರವೇರಿಸಲಿದ್ದಾರೆ. ಮಾಜಿ ಮುಖ್ಯ ಮಂತ್ರಿ ಹಾಗೂ ಹಾಲಿ ಶಾಸಕ ಬಸವರಾಜ ಬೊಮ್ಮಾಯಿಯವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪಲ್ಲಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಭಾಗವಹಿಸುವರು.
ಸಾಹಿತಿ ಕಥೆಗಾರ್ತಿ ಡಾ. ಹೇಮಾ ಪಟ್ಟಣಶೆಟ್ಟಿ, ಹೊರೆಯಾಲ ದೊರೆಸ್ವಾಮಿ, ಕುಮಾರಿ ನೇಹಾ ರಾಮಾಪುರ ಇವರು ಬರೆದ ಪುಸ್ತಕಗಳಿಗೆ ಪ್ರಶಸ್ತಿ ನೀಡಲಾಗುವುದು. ಹಿರಿಯ ಸಾಹಿತಿಗಳಾದ ಚಂದ್ರಶೇಖರ ವಸ್ತ್ರದ ಹಾಗೂ ರಮೇಶ ಕಲ್ಲನಗೌಡರ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆಗೆ ಕೋರಿದ್ದಾರೆ.