ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ
ಬ್ಯಾಡಗಿ: ಬೆಂಗಳೂರಿನ ಕರ್ನಾಟಕ ಸಂಸ್ಕೃತಿಕ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಏರಿ್ಡಸಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬ್ಯಾಡಗಿಯ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಪೂಜಾರ ಅವರಿಗೆ ಸನ್ಮಾನಿಸಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಜನಸೇವಾ ಸಂಘದ ಅಧ್ಯಕ್ಷ ಪ್ರಶಾಂತ ಚಕ್ರವರ್ತಿ, ಸಂಗೀತ ವಿದ್ವಾಂಸ ಶಶಿಧರ್ ಕೋಟೆ, ಚಲನಚಿತ್ರ ಮತ್ತು ರಂಗಭೂಮಿ ಕಲಾವಿದ ಶಂಕರ್ ಭಟ್, ಶಿಕ್ಷಣ ತಜ್ಞ ನಾಗರಾಜ್ ಶೆಟ್ಟಿ, ಇಸ್ಮಾಯಿಲ್ ಶಾಫಿ, ಪರಿಸರ ಚಂದ್ರಶೇಖರ್, ಇಸ್ಮಾಯಿಲ್ ದೊಡ್ಡಕೇರೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.