ಧಾರವಾಡ - ಹುಬ್ಬಳ್ಳಿ

ಪಿಯುಸಿ ಪರೀಕ್ಷೆಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಪಿಯುಸಿ ಪರೀಕ್ಷೆಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಪಿಯುಸಿ ಪರೀಕ್ಷೆಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

ಹುಬ್ಬಳ್ಳಿ 28: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆಯೋಜಿಸಿದ್ದ ಪಿಯುಸಿ ಪರೀಕ್ಷೆಯಲ್ಲಿ ಶೇ90ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.97 ಅಂಕಗಳನ್ನು ಪಡೆದ ಭೂಮಿಕಾ ಶಿವಶಂಕರ ಕಂಠಿ ಹಾಗೂ ಶೇ.94 ಅಂಕಗಳನ್ನು ಪಡೆದಅನನ್ಯ ವೀರಭದ್ರ​‍್ಪ ಬಣಕಾರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಸದಸ್ಯರು  ಶಾಲು, ಗ್ರಂಥ ನೀಡಿ, ಮಾಲಾರೆ​‍್ಣ ಮಾಡಿ ಅತ್ಯಂತ ಸಂತೋಷ, ಪ್ರೀತಿಯಿಂದ ಹೃದಯ ಸ್ಪರ್ಶಿಯಾಗಿ ಗೌರವಿಸಿದರು. ಅವರ ಸಾಧನೆಗೆ ಹೆಮ್ಮೆ, ಅಭಿಮಾನದ ಅಭಿನಂದನೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಅವರು ಇನ್ನೂ ಹೆಚ್ಚು ಸಾಧನೆ ಮಾಡಲಿ ಎಂದು ಶುಭಕೋರಿದರು. ಭಾರತೀಯ ವೈದ್ಯಕೀಯ ಸಂಸ್ಥೆ (ಐಎಂಎ) ರಾಜ್ಯಘಟಕದ ಮಾಜಿಉಪಾಧ್ಯಕ್ಷ, ಪಾಲಿಕೆ ನಿವೃತ್ ಆರೋಗ್ಯ ಅಧಿಕಾರಿ ಡಾ.ವಿ.ಬಿ.ನಿಟಾಲಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ‌್ಯದರ್ಶಿ, ಕರ್ನಾಟಕಜ್ಞಾನ ವಿಜ್ಞಾನ ಸಮಿತಿಯ ಜಿಲಾ ್ಲಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್‌ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ,  ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್‌.ಎಂ.ಸಾತ್ಮಾರ, ವೈದ್ಯ ಡಾ. ಬಸವ ಕುಮಾರ ತಲವಾಯಿ, ಪ್ರಕಾಶಕಂಠಿ, ವೀರಭದ್ರ​‍್ಪ ಬಣಕಾರ, ಅಮೋಘ ಎಸ್‌.ಕಂಠಿ, ಅಥರ್ವ ಪಿ.ಕಂಠಿ,  ಮುಂತಾದವರು ಭಾಗವಹಿಸಿದ್ದರು. 


ಸುದ್ದಿ ಓದಿ