ಜಿಎಸ್‌ಎಸ್ ಆಯುರ್ವೇದ ಕಾಲೇಜಿನಲ್ಲಿ ಡಾ. ಸಂಜಯ್ ಕದ್ಲಿಮಟ್ಟಿ ಅವರಿಗೆ ಪ್ರಶಸ್ತಿ
Award for Dr. Sanjay Kadlimatti at GSS Ayurveda College
ವಿಜಯಪುರ 02: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿರುವ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಅತ್ಯುತ್ತಮ ಆಯುರ್ವೇದ ವೈದ್ಯ ಪ್ರಶಸ್ತಿ ಲಭಿಸಿದೆ.ಮೈಸೂರಿನಲ್ಲಿ ಬುಧವಾರ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಜೆ.ಎಸ್.ಎಸ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಈ ಪ್ರಶಸ್ತಿ ನೀಡಿ ಗೌರವಿಸಿದೆ.ಆಯುರ್ವೇದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಯನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠದ ನಿರ್ದೇಶಕ ಆರ್. ಮಹೇಶ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಆಯುರ್ವೇದ ಕಾಲೇಜಿನ ಪ್ರಾಚಾರ್ಯ ಡಾ. ಸರಬೇಶ್ವರ ಕರ್, ಉಪಪ್ರಾಚಾರ್ಯ ಡಾ. ಶಿವಪ್ರಸಾದ ಹುಡೇದ, ಡಾ. ಶ್ರೀಹರಿ ಮುಂತಾದವರು ಉಪಸ್ಥಿತರಿದ್ದರು.ಡಾ. ಸಂಜಯ ಕಡ್ಲಿಮಟ್ಟಿ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ, ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಬೋಧಕ ಹಾಗೂ ಬೋಧಕ ಹೊರತಾದ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 