ಮಹಲಿಂಗಪುರ

ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಸಾಧಕ ವಿದ್ಯಾರ್ಥಿಗಳಿಗೆ ಪುರಸ್ಕಾರ

ಮಹಾಲಿಂಗಪುರ 12: ಸಮೀಪದ ಗ್ರಾಮ ಪಂಚಾಯತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುವಾರ ಸತ್ಕರಿಸಿ ಗೌರವಿಸಲಾಯಿತು. 

ಸ್ಥಳಿಯ ಗ್ರಾಮ ಪಂಚಾಯತಿ ಆವರಣದಲ್ಲಿ ಸ್ಥಳಿಯ ಸರಕಾರಿ ಪದವಿಪೂರ್ವ ವಿದ್ಯಾಲಯದಲ್ಲಿ ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಮತ್ತು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾದ್ಯಾಯೆ ಎಂ.ಎಸ್, ಜಿಟ್ಟಿಯವರನ್ನು ಸತ್ಕರಿಸಿ ಗೌರವಿಸಲಾಯಿತು.  

ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಮಹಾಂತೇಶ ಜಾಲಿಕಟ್ಟಿ, ಮನೋಜ ಹಟ್ಟಿ, ಬಾಳೇಶ ಬ್ಯಾಕೋಡ, ಬಾಳಪ್ಪ ಗಡೆಪ್ಪನವರ, ಸುರೇಶ ಪೂಜಾರಿ, ತಾ,ಪಂ, ಮಾಜಿ ಉಪಾಧ್ಯಕ್ಷ ಪ್ರಭು ಮುಧೋಳ, ತುಕಾರಾಮ ದೊಡಮನಿ, ಗ್ರಾ.ಪಂ. ಅಭಿವೃದ್ದಿ ಅಧಿಕಾರಿ ಶಿವಾನಂದ ಬಿರಾದರ, ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಹಲವಾರು ಜನ ಪ್ರಮುಖರು ಉಪಸ್ಥಿತರಿದ್ದರು. 


ಸುದ್ದಿ ಓದಿ