ಶಿಗ್ಗಾವ್

ತಾಲೂಕ ಸ್ವೀಪ್ ಸಮಿತಿ ವತಿಯಿಂದ ಮತದಾನದ ಬಗ್ಗೆ ಜಾಗೃತಿ

ತಾಲೂಕ ಸ್ವೀಪ್  ಸಮಿತಿ ವತಿಯಿಂದ ಮತದಾನದ ಬಗ್ಗೆ ಜಾಗೃತಿ

ಶಿಗ್ಗಾವಿ 27: ತಾಲೂಕ ಸ್ವೀಫ ಸಮಿತಿ ವತಿಯಿಂದ ಶಿಗ್ಗಾಂವ ಪಟ್ಟಣದ ಕಿತ್ತೂರರಾಣಿ ಚೆನ್ನಮ್ಮನ ವೃತ್ತದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮತದಾರರ ಕುರಿತು ಸ್ವೀಫ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯ ನಿರ್ವಾಹಕ ಅಧಿಕಾರಿ ಪಿ. ವಿಶ್ವನಾಥ್ ರವರು ಸ್ವಚ್ಚ ವಾಹಿನಿಗಳ ಮೂಲಕ ಮತದಾನದ ಕುರಿತಾದ ಆಡಿಯೋಗಳ ಮೂಲಕ ಪ್ರಚಾರ ಕೈಗೊಳ್ಳಲು ಹಸಿರು ನಿಶಾನೆ ತೋರಿಸುವದರ ಮೂಲಕ ಚಾಲನೆ ನೀಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.  

ಸ್ವೀಫ ಸಮಿತಿ ಕಾರ್ಯದರ್ಶಿ ಹಾಗೂ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಪ್ರಕಾಶ್ ಓಂಧಕರ ರವರು ಮತದಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಶಿಗ್ಗಾಂವ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ಕಾರ್ಯ ಕ್ರಮವನ್ನು ಹಮ್ಮಿಕೊಂಡು ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು 

ಈ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಧನಂಜಯ್, ಸಿಡಿಪಿಒ  ಗಣೇಶ್ , ತಾಲೂಕ ಆರೋಗ್ಯ ಅಧಿಕಾರಿ ಸತೀಶ್ ರವರು ಹಾಗೂ ಪುರಸಭೆ ಅಧಿಕಾರಿಗಳಾದ ಶೈಲಜಾ ಪಾಟೀಲ, ಆಂಜನೆಪ್ಪ ಸೇರಿದಂತೆ ಪುರಸಭೆ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್‌ಆರ್‌ಎಲ್‌ಎಮ್  ಒಕ್ಕೂಟಗಳ ಸದಸ್ಯನಿಯರು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ