ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕೆ ಯುವಜನರಲ್ಲಿ ಜಾಗೃತಿ ಅಗತ್ಯ: ಶಾಸಕ ಅಶೋಕ ಮನಗೂಳಿ
ಸಿಂದಗಿ 17; ಮಾದಕ ದ್ರವ್ಯಮುಕ್ತ ಭಾರತ ನಿರ್ಮಾಣದ ಉದ್ದೇಶದಿಂದ ಯುವಜನರಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಇಂದು ಅನಿವಾರ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಎಚ್. ಜಿ. ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕ ವಕೀಲರ ಸಂಘ ಸಿಂದಗಿಯ ಟಿ. ಎಸ್. ಪಿ. ಎಮ್ ಕಾನೂನು ಮಹಾವಿದ್ಯಾಲಯ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಮತ್ತು ಮಾದಕ ದ್ರವ್ಯ ಮುಕ್ತ ಭಾರತ ಜಾಗೃತಿ ಅಭಿಯಾನ ಹಾಗೂ ಕಾನೂನು ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಕೋರುವ, ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿ, ಯುವಜನರು ಅರಿವಿಲ್ಲದೆ ಮಾದಕ ದ್ರವ್ಯಗಳ ವ್ಯಸನದ ಸುಳಿಗೆ ಸಿಲುಕು ತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಎಂದರು.
ಸಿಂದಗಿಯ ಪ್ರಧಾನ ಹಿರಿಯ ಸಿವ್ಹಿಲ್ ನ್ಯಾಯಾಧೀಶ ನಾಗೇಶ ಮೊಗೇರ ಮಾತನಾಡಿ, ಅನೇಕ ಕೌಟುಂಬಿಕ ಸಮಸ್ಯೆಗಳ ಮೂಲ ಮದ್ಯಪಾನ ಮತ್ತು ಮಾದಕ ದ್ರವ್ಯ ವ್ಯಸನವಾಗಿದೆ. ವ್ಯಸನವು ವ್ಯಕ್ತಿಯ ಬದುಕನ್ನು ಮಾತ್ರವಲ್ಲದೆ ಇಡೀ ಕುಟುಂಬದ ನೆಮ್ಮದಿಯನ್ನು ಹಾಳುಮಾಡುತ್ತದೆ. ಆದ್ದರಿಂದ ಯುವಜನತೆ ಎಚ್ಚೆತ್ತು ಕೊಂಡು ದುಶ್ಚಟಗಳಿಂದ ದೂರವಿರಬೇಕು. ಜಾಗೃತ ಹಾಗೂ ಜವಾಬ್ದಾರಿ ಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಮೂಲಕ ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದರು.
ಈ ವೇಳೆ 1 ನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಎ. ಆರ್. ಎ. ಮುಲ್ಲಾ, ಪ್ರಧಾನ ಸಿವ್ಹಿಲ್ ನ್ಯಾಯಾಧೀಶೆ ಪಂಕಜಾ ಕೊಣ್ಣೂರ, ಶಿವಪ್ಪಗೌಡ ಬಿರಾದಾರ, ವಕೀಲರ ಸಂಘದ ಅಧ್ಯಕ್ಷ ಎಸ್. ಬಿ. ಪಾಟೀಲ ಗುಂದಗಿ, ಅಪರ ಸರ್ಕಾರಿ ವಕೀಲ ಬಿ. ಜಿ. ನೆಲ್ಲಗಿ, ಎಸ್. ಎಮ್. ಕಾಚೂರ ಮಾತನಾಡಿ,ಮಾದಕ ದ್ರವ್ಯ ಸೇವನೆಯಿಂದ ಉಂಟಾ ಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ವೇದಿಕೆ ಮೇಲೆ 1 ನೇ ಹೆಚ್ಚುವರಿ ಹಿರಿಯ ಸಿವ್ಹಿಲ್ ಮತ್ತು ಜೆ. ಎಮ್. ಎಫ್. ಸಿ ನ್ಯಾಯಾಧೀಶ ನಾಗರಾಜ ತಳವಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರೇತರ ಸದಸ್ಯ ಶಿವಾನಂದ ಪಾಟೀಲ ಇದ್ದರು. ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿದರು, ಪ್ರಾಚಾರ್ಯ ಎ. ಆರ್. ಹೆಗ್ಗನದೊಡ್ಡಿ ಸ್ವಾಗತಿಸಿದರು, ಉಪನ್ಯಾಸಕ ಸಿದ್ದಲಿಂಗ ಕಿಣಗಿ ನಿರೂಪಿಸಿದರು.