ಅಗ್ನಿ ಅವಘಡಗಳ ಕುರಿತು ಅರಿವು ಮೂಡಿಸುವ ದಿನ
ಬಳ್ಳಾರಿ 23: ; ಅಗ್ನಿಶಾಮಕ ಇಲಾಖೆಯ ವತಿಯಿಂದ ನಗರದ ಗಾಂಧಿನಗರದಲ್ಲಿರುವ ಶ್ರೀ ಗುರು ತಿಪ್ಪೇರುದ್ರ ಕಾಲೇಜಿನಲ್ಲಿ ಮಂಗಳವಾರ ಅಗ್ನಿ ಅವಘಡಗಳ ಅರಿವು ಮತ್ತು ಆಗ್ನಿ ಅನಾಹುತ ತಡೆಗಟ್ಟುವ ದಿನವನ್ನಾಗಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಚೇರ್‍ಮನ್‍ಗಳಾದ ರುದ್ರಪ್ಪ ಹಾಗೂ ಪ್ರಾಂಶುಪಾಲರಾದ ನಾಗರಾಜ, ಅಗ್ನಿಶಾಮಕ ಇಲಾಖೆಯ ಕೆ.ತಿಮ್ಮಾರೆಡ್ಡಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಾದ ಜಿ.ಬಸವರಾಜ, ಅಗ್ನಿಶಾಮಕ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಇದ್ದರು.