ಆತ್ಮಹತ್ಯೆ ತಡೆಗೆ ಜಾಗೃತಿ : ನೇರ ಫೋನ್‌-ಇನ್ ಕಾರ್ಯಕ್ರಮ

ಆತ್ಮಹತ್ಯೆ ತಡೆಗೆ ಜಾಗೃತಿ : ನೇರ ಫೋನ್‌-ಇನ್ ಕಾರ್ಯಕ್ರಮ  Awareness for Suicide Prevention: Live Phone-in Programme

ಲೋಕದರ್ಶನ ವರದಿ 

ಬೆಳಗಾವಿ ಸೆ.10: ಕೆಎಲ್‌ಇ ವಿಶ್ವವಿದ್ಯಾಲಯ, ಕೆಎಲ್‌ಇ ಸಂಸ್ಥೆ ಹಾಗೂ  ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ ಅಂಗವಾಗಿ ನೇರ ಫೋನ್‌-ಇನ್ ಕಾರ್ಯಕ್ರಮ ನಡೆಯಿತು.  

ಗುರುವಾರ ಬೆಳಗ್ಗೆ 10ರಿಂದ 11ರವರೆಗೆ ನಡೆದ ಕಾರ್ಯಕ್ರಮದಲ್ಲಿ ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಪ್ರಾಚಾರ್ಯ ಡಾ. ಸುಹಾಸಕುಮಾರ ಶೆಟ್ಟಿ ಭಾಗವಹಿಸಿ ಆತ್ಮಹತ್ಯೆ ತಡೆ ಕುರಿತು ಜಾಗೃತಿ ಮೂಡಿಸಿದರು.  

ಆತ್ಮಹತ್ಯೆಗೆ ಕಾರಣಗಳು, ಯಾವ ವಯೋಮಾನದವರಲ್ಲಿ ಹೆಚ್ಚು ಕಂಡುಬರುತ್ತದೆ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕಾಣಿಸಿಕೊಳ್ಳುವ ಮುನ್ಸೂಚನೆಗಳು ಹಾಗೂ ಆತ್ಮಹತ್ಯೆ ಪ್ರವೃತ್ತಿಯನ್ನು ನಿಯಂತ್ರಿಸುವ ವಿಧಾನಗಳ ಕುರಿತು ಮಾಹಿತಿ ನೀಡಲಾಯಿತು.

ಸಾಮಾಜಿಕ ಜಾಲತಾಣಗಳು ಹಾಗೂ ಆನ್ಲೈನ್ ಗೇಮ್ಗಳಿಂದ ಯುವಕರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಆತ್ಮಹತ್ಯೆ ಆಲೋಚನೆ ಮೂಡಿದಾಗ ಮನೋವೈದ್ಯರ ಸಲಹೆ ಪಡೆಯುವ ಅಗತ್ಯದ ಕುರಿತು ಜಾಗೃತಿ ಮೂಡಿಸಲಾಯಿತು.  

ಕಂಕಣವಾಡಿ ಆಯುರ್ವೇದ ಆಸ್ಪತ್ರೆಯ ಮನೋರೋಗ ವಿಭಾಗದಲ್ಲಿ ಲಭ್ಯವಿರುವ ಚಿಕಿತ್ಸೆ ಹಾಗೂ ಸೌಲಭ್ಯಗಳ ಬಗ್ಗೆಯೂ ಮಾಹಿತಿ ನೀಡಲಾಯಿತು. ಕೇಳುಗರ ಪ್ರಶ್ನೆಗಳಿಗೆ ತಜ್ಞರು ಉತ್ತರಿಸಿದರು.  ವೇಣುಧ್ವನಿ ಕಾರ್ಯಕ್ರಮ ನಿರ್ವಾಹಕರಾದ ಮನೀಷ್ ಪಿ.ಎಸ್‌. ಹಾಗೂ ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.