ಬೆಳಗಾವಿ

ಯುವ ಮತದಾರರ ನೋಂದಣಿ ಜಾಗೃತಿ ಸಭೆ: ಕಡ್ಡಾಯವಾಗಿ ಹೆಸರು ನೊಂದಾಯಿಸಿಕೊಳ್ಳಲು ಕರೆ

ಯುವ ಮತದಾರರ ನೋಂದಣಿ ಜಾಗೃತಿ ಸಭೆ: ಕಡ್ಡಾಯವಾಗಿ ಹೆಸರು ನೊಂದಾಯಿಸಿಕೊಳ್ಳಲು ಕರೆ


ಸವದತ್ತಿ  23: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಅತ್ಯಂತ ಅಮೂಲ್ಯ ಹಕ್ಕಾಗಿದ್ದು, ಕ್ಷೇತ್ರದ ಅರ್ಹ ಯುವ ಮತದಾರರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು 17-ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ತಿಳಿಸಿದರು.ನಗರದ ಶ್ರೀ ಕೆ.ಎಂ. ಮಾಮನಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಮತದಾರರ ನೋಂದಣಿ ಕುರಿತ ಜಾಗೃತಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಪ್ರಜಾಪ್ರಭುತ್ವದ ಬಲವರ್ಧನೆಯಲ್ಲಿ ಯುವ ಜನತೆಯ ಪಾತ್ರ ಹಾಗೂ ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿಸ್ತೃತವಾದ ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ತಾಪಂ ಇಒ ಆನಂದ ಬಡಕುಂದ್ರಿ, ಕಾಲೇಜಿನ ಮುಖ್ಯಶಿಕ್ಷಕರು ಮಾರುತಿ ಎಮ್‌. ಸಿಡಿಪಿಒ ಅಮೃತ ಸಾಣಿಕೊಪ್ಪ, ಮಾಸ್ಟರ್ ಟ್ರೇನರ್ ಎಮ್‌. ಬಿ. ಕಮ್ಮಾರ ಹಾಗೂ ಬಿಎಲ್‌ಒ ಪಿ. ಎಸ್‌. ಶಿಂಧೆ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ