ಆತ್ಮಹತ್ಯೆ ತಡೆಗೆ ಜಾಗೃತಿ ಅಗತ್ಯ: ಸಿ.ಎಸ್. ಶಿವನಗೌಡ
Awareness needed to prevent suicide: C.S. Shivanagowda
ಲೋಕದರ್ಶನ ವರದಿ
ಗದಗ, ಸೆ.16: ಆತ್ಮಹತ್ಯೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ವಿಶೇಷವಾಗಿ ವಿದ್ಯಾರ್ಥಿಗಳಲ್ಲಿ ಕಂಡುಬರುತ್ತಿರುವ ಮಾನಸಿಕ ಒತ್ತಡ ಆತಂಕಕಾರಿ ಬೆಳವಣಿಗೆಯಾಗಿದೆ. ಆತ್ಮಹತ್ಯೆ ತಡೆಗೆ ಪ್ರತಿಯೊಬ್ಬರೂ ಕೈಜೋಡಿಸಿ ಜಾಗೃತಿ ಮೂಡಿಸಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್. ಶಿವನಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಡಿ.ಜಿ.ಎಂ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಬುಧವಾರ ಗದಗದಲ್ಲಿ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ-2026 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜೀವನ ಅಮೂಲ್ಯವಾಗಿದ್ದು, ಆತ್ಮಹತ್ಯೆ ತಡೆಗೆ ಪ್ರತಿಯೊಬ್ಬರೂ ಪ್ರಯತ್ನಿಸಬೇಕು. ಆತ್ಮಹತ್ಯೆಯ ಆಲೋಚನೆಗಳು ಬಂದಾಗ ತಕ್ಷಣ ವೈದ್ಯಕೀಯ ಚಿಕಿತ್ಸೆ ಹಾಗೂ ಆಪ್ತ ಸಮಾಲೋಚನೆ ಪಡೆಯಬೇಕು. ಟೆಲಿ-ಮಾನಸ್ ಸಹಾಯವಾಣಿ 14416 ಮೂಲಕವೂ ನೆರವು ಪಡೆಯಬಹುದು. ಹದಿಹರೆಯದ ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಗಮನ ನೀಡಬೇಕು ಎಂದು ಸಲಹೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 