ಬೀದಿನಾಟಕ ಮೂಲಕ ಸರ್ಕಾರದ ಯೋಜನೆಗಳ ಜಾಗೃತಿ
Awareness of government schemes through street plays
ಲೋಕದರ್ಶನ ವರದೀಬೀದಿನಾಟಕ ಮೂಲಕ ಸರ್ಕಾರದ ಯೋಜನೆಗಳ ಜಾಗೃತಿ
ಬಳ್ಳಾರಿ 03:
ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕ್ಷೇತ್ರ ಪ್ರಚಾರ ಕಾರ್ಯಕ್ರಮದಡಿ ಸೋಮವಾರ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಹಾಗೂ ವಿವಿಧ ಯೋಜನೆಗಳ ಕುರಿತು ಬೀದಿನಾಟಕ ಹಾಗೂ ಜಾನಪದ ಸಂಗೀತ ಕಲಾತಂಡಗಳಿಂದ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಗ್ರಾಮದ ಹಿರಿಯರಾದ ತಿಮ್ಮಪ್ಪ ಅವರು ತಮಟೆ ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಇಬ್ರಾಹಿಂಪುರ ಚಿಗುರು ಕಲಾತಂಡ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ವಿವಿಧ ಜನಪರ ಯೋಜನೆಗಳ ಕುರಿತು ಬೀದಿ ನಾಟಕದ ಮೂಲಕ ಹಾಡುಗಳು ಪ್ರಸ್ತುತಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಈರಣ್ಣ, ತಿಪ್ಪಯ್ಯ, ಭಾಷಾ ಸಾಬ್, ದುರ್ಗಪ್ಪ, ಸಿದ್ದಪ್ಪ, ನಾಗಪ್ಪ, ಕಲಾವಿದರಾದ ಹುಲುಗಪ್ಪ ಎಸ್.ಎಂ., ಹೆಚ್.ರಮೇಶ್, ಹೆಚ್.ಎರ್ರಿಸ್ವಾಮಿ, ನವೀನ್, ವೆಂಕಟೇಶ್, ಗಂಗಮ್ಮ, ರುತಮ್ಮ, ರಾಜು ಸೇರಿದಂತೆ ಸಾರ್ವಜನಿಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 