ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಕುರಿತ ಜಾಗೃತಿ ಜಾಥಾಗೆ ಚಾಲನೆ
ಬಳ್ಳಾರಿ 29: ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಬಗ್ಗೆ ಅರಿವು ಮೂಡಿಸಲು ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪಿ.ಎಸ್.ಹಟ್ಟಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಬಿ.ಕೆ.ರಾಮಲಿಂಗಪ್ಪ ಅವರು ಶುಕ್ರವಾರ ಹಳೇ ಮುನಿಸಿಪಲ್ ಕಚೇರಿಯ ಹತ್ತಿರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ನಂತರ ಜಾಗೃತಿ ಜಾಥಾವು ನಗರದ ಹಳೇ ಮುನಿಸಿಪಲ್ ಕಚೇರಿಯಿಂದ ಆರಂಭಗೊಂಡು ಗಡಿಗಿ ಚನ್ನಪ್ಪ ವೃತ್ತ (ರಾಯಲ್ ಸರ್ಕಲ್) ದಿಂದ ಹೆಚ್.ಜಿ. ಗವಿಯಪ್ಪ ವೃತ್ತ (ಮೋತಿ ಸರ್ಕಲ್) ದವರೆಗೆ ಜಾಥಾ ನಡೆಯಿತು.
ಈ ಸಂದರ್ಭದಲ್ಲಿ ಬಳ್ಳಾರಿ ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿಗಳಾದ ಗಾದಿಲಿಂಗನಗೌಡ, ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಯ ಅಭಿಯಾನ ವ್ಯವಸ್ಥಾಪಕರಾದ ಪ್ರಾಣೇಶ್ ಹಾಗೂ ಲಕ್ಷ್ಮೀ ಮತ್ತು ಇತರೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಬಳ್ಳಾರಿ ಮಹಾನಗರಪಾಲಿಕೆಯ ವ್ಯಾಪ್ತಿಯ ಡೇ-ನಲ್ಮ್ ಅಭಿಯಾನದಡಿ ರಚಿಸಲಾದ ಸ್ವ-ಸಹಾಯ ಸಂಘಗಳ ಪ್ರತಿನಿಧಿಗಳು, ಕೌಶಲ್ಯ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳು ಸೇರಿ ಒಟ್ಟಾರೆ ಸುಮಾರು 200 ಜನರು ಜಾಥಾದಲ್ಲಿ ಪಾಲ್ಗೊಂಡಿದ್ದರು. ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದ ಜಾಗೃತಿ ಸಂದೇಶದ ಫಲಕಗಳು ಜಾಥಾದಲ್ಲಿ ಗಮನಸೆಳೆದವು.