ಗದಗ 17: ವಿಶ್ವ ಅಧಿಕ ರಕ್ತದೊತ್ತಡ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ವಿಭಾಗ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜ್, ಗದಗ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ “ಅಧಿಕ ರಕ್ತದೊತ್ತಡ” ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಡಾ. ಪ್ರೀತ್ ಕೋನಾ, ತಾಲೂಕಾ ಆರೋಗ್ಯಾಧಿಕಾರಿಗಳು, ಗದಗ ಇವರು ಉದ್ಘಾಟಿಸಿ ಮಾತನಾಡುತ್ತ ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಪ್ರತಿ ವರ್ಷ ಮೇ-17 ರಂದು ಆಚರಿಸಲಾಗುತ್ತಿದ್ದು, ಈ ವರ್ಷದ ಘೋಷವಾಖ್ಯೆ “ರಕ್ತದೊತ್ತಡವನ್ನು ನಿಖರವಾಗಿ ಅಳೆಯಿರಿ, ನಿಯಂತ್ರಿಸಿ ಹೆಚ್ಚುಕಾಲ ಬದುಕಿ” ಎಂದು ಹೇಳುತ್ತಾ ಅಧಿಕ ರಕ್ತದೊತ್ತಡ ಖಾಯಿಲೆಯ ಹಾಗೂ ದೇಹದ ಅಂಗಾಗಳ ಮೇಲಾಗುವ ಗಂಭೀರ ಪರಿಣಾಮಗಳ ಕುರಿತು ಮಾತನಾಡಿದರು. ಈಗಿನ ಆಧುನಿಕ ಜೀವನ ಶೈಲಿಯಿಂದಾಗಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, 100 ಜನರಲ್ಲಿ 25 ಜನರಿಗೆ ಅಧಿಕ ರಕ್ತದೊತ್ತಡ ಕಂಡುಬರುತ್ತದೆ ಎಂದು ತಿಳಿಸಿದರು. ಮಧ್ಯಪಾನ, ತಂಬಾಕು ಸೇವನೆ, ಅಹಿತಕರ ಆಹಾರ ಸೇವನೆ, ದೈಹಿಕ ಚಟುವಟಿಕೆಗಳ ಕೊರತೆ, ಅತೀಯಾದ ದೇಹದ ತೂಕ, ಮಾನಸಿಕ ಒತ್ತಡ ಇವೆಲ್ಲದರ ಕಾರಣದಿಂದ ಅಧಿಕ ರಕ್ತದೊತ್ತಡದ ಪ್ರಕರಣಗಳು ಹೆಚ್ಚಾಗುತ್ತಿವೆ. ಆರಂಭಿಕ ಹಂತದಲ್ಲಿ ಅಧಿಕ ರಕ್ತದೊತ್ತಡವನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ಪಡೆಯದಿದ್ದರೆ ಹೃದಯ ಸಂಬಂಧಿ ಖಾಯಿಲೆ, ಪಾರ್ಶ್ವವಾಯು, ಮೂತ್ರಪಿಂಡದ ಖಾಯಿಲೆ ಇತ್ಯಾದಿ ದೀರ್ಘಕಾಲದ ರೋಗಗಳಿಂದ ಬಳಲಬೇಕಾಗುತ್ತದೆ.
ಜಿಲ್ಲೆಯಲ್ಲಿ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕಾರ್ಯಕ್ರಮದಲ್ಲಿ 30 ವರ್ಷ ಮೇಲ್ಪಟ್ಟವರಿಗೆ ವರ್ಷದಲ್ಲಿ ಕನಿಷ್ಟ ಒಂದು ಬಾರಿ ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ಪರೀಕ್ಷೆ ಮಾಡಲಾಗುತ್ತದೆ ಮತ್ತು ಆರಂಭಿಕ ಹಂತದಲ್ಲಿ ರೋಗಗಳನ್ನು ಪತ್ತೆ ಮಾಡಿ ಸೂಕ್ತ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ. ಜಿಲ್ಲೆಯಲ್ಲಿ ಪ್ರತಿ ಹಳ್ಳಿಗಳಲ್ಲಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಕೈಗೊಳ್ಳುತ್ತ ನಮ್ಮ ಇಲಾಖೆಯ ಆಶಾ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನೀರೀಕ್ಷಣಾಧಿಕಾರಿಗಳು ರಕ್ತದೊತ್ತಡ, ಮಧುಮೇಹ ಹಾಗೂ 3 ಸಾಮಾನ್ಯ ಕ್ಯಾನ್ಸರ್ಗಳ (ಬಾಯಿ, ಸ್ತನ ಹಾಗೂ ಗರ್ಭಕಂಠ) ತಪಾಸಣೆಯನ್ನು ಕೈಗೊಳ್ಳುತ್ತಿದ್ದಾರೆ. ಖಚಿತಪಟ್ಟ ಪ್ರಕರಣಗಳಿಗೆ ವೈದ್ಯಾಧಿಕಾರಿಗಳಿಂದ ಓಷಧಿಗಳನ್ನು ವಿತರಿಸಲಾಗುತ್ತದೆ. ಉತ್ತಮ ಜೀವನ ಶೈಲಿ, ಸಮತೋಲನ ಆಹಾರ, ತರಕಾರಿ ಹಣ್ಣು ಹಂಪಲಗಳ ಸೇವನೆ, ಪ್ರತಿನಿತ್ಯ ಯೋಗ, ಧ್ಯಾನ, ನಿಯಮಿತವಾಗಿ ಉಪ್ಪು ಸೇವನೆ (ದಿನಕ್ಕೆ 5 ಗ್ರಾಂ) ಮತ್ತು ದೈಹಿಕ ಚಟುವಟಿಕೆಯಿಂದ ಅಧಿಕ ರಕ್ತದೊತ್ತಡ ಖಾಯಿಲೆ ಬರದಂತೆ ತಡೆಯಬಹುದೆಂದು ತಿಳಿಸಿದರು.ಡಾ. ರವಿ ಕಡಗಾವಿ, ಜಿಲ್ಲಾ ಕಾರ್ಯಕ್ರಮ ಸಂಯೋಜಕರು, ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ವಿಭಾಗ, ಗದಗ ರವರು ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕುರಿತು ಮಾತನಾಡುತ್ತ ಅಧಿಕ ರಕ್ತದೊತ್ತಡವನ್ನು ಖಟಜಟಿಣ ಏಟಟಜಡಿ ಎಂದು ಕರೆಯುತ್ತಾರೆ. ಆದ್ದರಿಂದ 30 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ವರ್ಷದಲ್ಲಿ ಕನಿಷ್ಠ 1 ಬಾರಿ ಅಧಿಕ ರಕ್ತದೊತ್ತಡ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ತಿಳಿಸಿದರು. ಜಿಲ್ಲೆಯಲ್ಲಿ ಅಸಾಂಕ್ರಾಮಿಕ ಕಾಯಿಲೆಗಳ ಪ್ರಾಥಮಿಕ ಹಂತದ ತಪಾಸಣೆಯು ಪ್ರತಿ ಗ್ರಾಮಗಳಲ್ಲಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 7 ಎನ್.ಸಿ.ಡಿ. ಕ್ಲಿನಿಕ್ಗಳು ಕಾರ್ಯ ನಿರ್ವಹಿಸುತ್ತಿವೆ ಹಾಗೂ ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ಅಸಾಂಕ್ರಾಮಿಕ ಕಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಓಷಧ ವಿತರಿಸಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯು 2025 ರ ಒಳಗಾಗಿ ಸುಮಾರು 25ಅ ಅಸಾಂಕ್ರಾಮಿಕ ಕಾಯಿಲೆಗಳಿಂದ ಮರಣ ಹೊಂದುವುದನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದರು. ಅಧಿಕ ರಕ್ತದೊತ್ತಡ ಹಾಗೂ ಇತರೇ ಅಸಾಂಕ್ರಾಮಿಕ ರೋಗಗಳ ಕುರಿತು ಸಮುದಾಯ ಮಟ್ಟದಲ್ಲಿ ಆರೋಗ್ಯ ಶಿಕ್ಷಣವನ್ನು ನಮ್ಮ ಕ್ಷೇತ್ರ ಸಿಬ್ಬಂದಿಯವರು ಸಾರ್ವಜನಿಕರಿಗೆ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಶಶಿಕಾಂತ ಕಳಕಣ್ಣವರ, ಉಪ ಪ್ರಾಂಶುಪಾಲರು ಹಾಗೂ ಉಪನ್ಯಾಸಕರಾದ ಶ್ರೀಮತಿ ಭುವನೇಶ್ವರಿ ಪಾಟೀಲ, ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜ್, ಗದಗ ರವರು ಮಾತನಾಡುತ್ತ ಅಧಿಕ ರಕ್ತದೊತ್ತಡ ಖಾಯಿಲೆ ಕುರಿತು ಇಂತಹ ಅಭೂತಪೂರ್ವ ಮಾಹಿತಿ ಹೊಂದಿದ ಕಾರ್ಯಕ್ರಮಗಳು ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಮ್ಮಿಕೊಳ್ಳುವುದು ಅವಶ್ಯಕವಾಗಿದ್ದು, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಮೂಲಕ ಮನೆ ಹಾಗೂ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ಅನುಕೂಲವಾಗುವುದೆಂದು ತಿಳಿಸಿದರು. ಉತ್ತಮ ಜೀವನಶೈಲಿ, ದುಷ್ಚಟಗಳಿಂದ ದೂರವಿದ್ದು, ಉತ್ತಮ ಆಹಾರ ಪದ್ಧತಿಯಿಂದ ಆರೋಗ್ಯಕರ ಸಮಾಜವನ್ನು ನಿರ್ಮಾಣ ಮಾಡಿ ಅಧಿಕ ರಕ್ತದೊತ್ತಡದಂತಹ ಅಸಾಂಕ್ರಾಮಿಕ ಖಾಯಿಲೆಯಿಂದ ದೂರವಿರಬಹುದೆಂದು ತಿಳಿಸಿದರು.
ಕು. ದೀಪಾ ಹಿರೇಮನಿ ರವರು ಪ್ರಾರ್ಥಿಸಿದರು.ಮುತ್ತುನಗೌಡ ಎಸ್. ರಬ್ಬನಗೌಡ್ರ, ಹಿ.ಆ.ನೀರೀಕ್ಷಣಾಧಿಕಾರಿಗಳು, ಜಿಲ್ಲಾ ಸಮೀಕ್ಷಣಾ ಘಟಕ, ಗದಗ ರವರು ಕಾರ್ಯಕ್ರಮ ನಿರೂಪಿಸಿದರು. ಕು. ಉಮಾ ಮಹೇಶ್ವರಿ ರವರು ವಂದಿಸಿದರು.
ಈ ಸಂದರ್ಭದಲ್ಲಿ ಡಾ.ಪ್ರವೀಣ ನಿಡಗುಂದಿ, ಎಪಿಡೆಮಿಯೊಲಾಜಿಸ್ಟ್, ಗೋಪಾಲ ಸುರಪುರ, ಜಿಲ್ಲಾ ಸಲಹೆಗಾರರು ತಂಬಾಕು ನಿಯಂತ್ರಣ ಕೋಶ, ಜಸ್ವಿನ್ ತೇಗೂರ, ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರು, ರಮೇಶ ಅರಹುಣಸಿ, ಹಿ.ಆ.ನೀರೀಕ್ಷಣಾಧಿಕಾರಿಗಳು, ವಿಠಲ್ ನಾಯಕ್, ಜಿಲ್ಲಾ ಆರ್ಥಿಕ ಮತ್ತು ಸಲಕರಣೆ ಸಲಹೆಗಾರರು, ವಿರೇಶ ಮದಕಟ್ಟಿ, ಡಾಟಾ ಮ್ಯಾನೇಜರ್, ಐಡಿಎಸ್ಪಿ ವಿಭಾಗ, ಫಯಾಜ್ ಮಕಾನದಾರ, ಡಿಈಓ ಹಾಗೂ ಜಿಲ್ಲಾ ಸಮೀಕ್ಷಾಧಿಕಾರಿಗಳ ಕಚೇರಿಯ ಸಿಬ್ಬಂದಿಗಳು ಹಾಗೂ ಸ್ಪೂರ್ತಿ ಪ್ಯಾರಾ ಮೆಡಿಕಲ್ ಕಾಲೇಜಿನ ಎಲ್ಲ ಉಪನ್ಯಾಸಕರು, ಆಡಳಿತ ವರ್ಗದವರು, ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.