ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
Awareness program as part of World No Tobacco Day
ಕಂಪ್ಲಿ 03: ದೇಶದಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣವಾಗ ಬೇಕಾದರೆ ಯುವಕರ ಸಹಕಾರ ತುಂಬ ಅವಶ್ಯಕ ಎಂದು ದಂತ ವೈದ್ಯಧಿಕಾರಿ ಡಾ.ಶ್ರೀನಿವಾಸ ಹೇಳಿದರು ಪಟ್ಟಣದ ಪ್ರಾಥಮಿಕ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಏರ್ಾಡಿಸಿದ ವಿಶ್ವ ತಂಬಾಕು ರಹಿತ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿ ದುಶ್ಚಟಗಳಿಗೆ ಬಲಿಯಾಗಿ ಜೀವ ಹಾಗೂ ಜೀವನದ ಮೌಲ್ಯಗಳನ್ನು ಕಳೆದುಕೊಳ್ಳಬೇಡಿ ತಂಬಾಕು ಅರೋಗ್ಯಕೇ ಹಾನಿಕರ ಅದರಿಂದ ದೂರವಿರಿ.
ತಂಬಾಕು ಸೇವನೆಯಿಂದ ಹಲವಾರು ರೋಗಳಿಗೆ ತುತ್ತಾಗಬೇಕಾಗುತ್ತದೆ, ರೋಗಗಳು ಬಂದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ರೋಗಗಳು ಬಾರದಂತೆ ಎಚ್ಚರಿಕೆ ವಹಿಸಬೇಕಾದರೆ ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರವಿರಬೇಕೆಂದರು ಆರೋಗ್ಯದ ದೃಷ್ಟಿಯಿಂದ ತಂಬಾಕು ಉತ್ಪನ್ನಗಳ ಸೇವನೆಯನ್ನು ತ್ಯಜಿಸುವಂತೆ ಸಾರ್ವಜನಿಕರಲ್ಲಿ ವಿಶೇಷವಾಗಿ ಯುವಜನತೆಯಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಡಾ.ಹಾರಿಕ, ಡಾ.ವಿಶ್ವನಾಥ್, ಆರೋಗ್ಯ ನೀರೀಕ್ಷಣಾಧಿಕಾರಿ ಪಿ.ಬಸವರಾಜ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳು, ಎನ್.ಸಿಡಿ ಸಿಬ್ಬಂದಿಗಳು, ಸಾರ್ವಜನಿಕರು ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 