ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ
Awareness program as part of World Rabies Day
ವಿಜಯಪುರ 29: ದೇಶದಲ್ಲಿ ಪ್ರತಿವರ್ಷ ದಿನದಿಂದ ದಿನಕ್ಕೆ ಹೆಚ್ಚು ಜನ ರೇಬಿಸ್ ಮಹಾಮಾರಿಗೆ ಬಲಿಯಾಗುತ್ತಿದ್ದು, ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದಾಗ ನಿರ್ಲಕ್ಷಿಸದೇ ಲಸಿಕೆ ಹಾಕಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕದಿಂದ ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮದಡಿ ಅಶ್ವಿನಿ ಇನ್ಸಿ-್ಟಟ್ಯೂಟ್ ಆಫ್ ನರ್ಸಿಂಗ್ ಸಾಯಿನ್ಸ್ ಕಾಲೇಜ್‌ನಲ್ಲಿ ಸೋಮವಾರ ಏರಿ್ಡಸಿದ್ದ ವಿಶ್ವ ರೇಬಿಸ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ನಾಯಿ ಕಡಿತಕ್ಕೆ ತುತ್ತಾದ 23 ಸಾವಿರ ಜನರಿಗೆ ಚಿಕಿತ್ಸೆ ನೀಡಲಾಗಿದೆ. ಸಾರ್ವಜನಿಕರು ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದ್ದಲ್ಲಿ ಲಸಿಕೆ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಡಾ. ಅಪ್ಪಾಸಾಹೇಬ ಇನಾಮದಾರ ಅವರು ಮಾತನಾಡಿ, ರೇಬಿಸ್ ಅನ್ನುವುದು ಸಸ್ತನಿಗಳಲ್ಲಿ ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ನೇರವಾಗಿ ನರಮಂಡಲದ ಮೇಲೆ ಬೀರಿ, ಮಿದುಳಿಗೆ ಘಾಸಿಯಾಗಿ ಸಾವು ಸಂಭವಿಸುತ್ತದೆ. ನಾಯಿ ಕಡಿತದ ಪರಿಣಾಮ ಕುರಿತು ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಎಲ್.ಎಚ್. ಬಿದರಿ ವಹಿಸಿದ್ದರು. ಜಿಲ್ಲಾ ಆಸ್ಪತ್ರ ವೈದ್ಯರಾದ ಡಾ.ಅಚ್ಯುತ ಪತ್ತಾರ, ನರ್ಸಿಂಗ್ ಕಾಲೇಜಿನ ಪ್ರಾಂಶುಪರಾದ ಡಾ.ರಜನಿದೇವಿ ಹಿರೇಮಠ, ಡಾ.ಎಂ.ಬಿ.ಬಿರಾದಾರ, ಆರೋಗ್ಯ ಇಲಾಖೆಯ ಜಾನ್ ಕಟವಟಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಗಂಗಾಧರ ಕೋಳೂರ, ಡಾ.ಪ್ರಿಯದರ್ಶಿನಿ ಕೆಂಚರಡ್ಡಿ, ಡಾ. ಸುರೇಶ ಪಾಶ್ಚಾಪುರ, ಆರ್.ವಿ.ಹೊನವಾಡ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ಅಧಿಕಾರಿಗಳು, ಕಾಲೇಜಿನ ಬೋಧಕ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಶ್ರೀಕಾಂತ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಎನ್.ಆರ್.ಬಾಗವಾನ್ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 