ಮುದ್ದೆಬಿಹಾಲ್

ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಮುದ್ದೇಬಿಹಾಳದಲ್ಲಿ ಜಾಗೃತಿ ಕಾರ್ಯಕ್ರಮ

ಮಾನವ ಕಳ್ಳ ಸಾಗಾಣಿಕೆ ತಡೆ ಕುರಿತು ಮುದ್ದೇಬಿಹಾಳದಲ್ಲಿ ಜಾಗೃತಿ ಕಾರ್ಯಕ್ರಮ

ಮುದ್ದೇಬಿಹಾಳ 03 : ಸ್ವಾಮಿ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಲಯ, ಮುದ್ದೇಬಿಹಾಳದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪೊಲೀಸ್ ಇಲಾಖೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ “ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ” ಅಂಗವಾಗಿ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಗೌರವಾನ್ವಿತ   ಸಚಿನ್ ಕೌಶಿಕ್ ಆರ್‌.ಎನ್‌. ಐದನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಮುದ್ದೇಬಿಹಾಳ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು.  

ಮುಖ್ಯ ಅತಿಥಿಗಳಾಗಿ ಹಿರಿಯ ಸಿವಿಲ್ ನ್ಯಾಯಾಧೀಶರಾದ   ರವಿಕುಮಾರ್ ಬಿ. ಕಟ್ಟಿಮನಿ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ   ಶಶಿಕಾಂತ ಮಾಲಗತ್ತಿ,   ರಾಮಮೂರ್ತಿ ಹಾಗೂ ವಿಶೇಷ ಉಪನ್ಯಾಸಕರಾಗಿ ನ್ಯಾಯವಾದಿ   ಎನ್‌.ಬಿ. ಮುದ್ನಾಳ್ ಉಪಸ್ಥಿತರಿದ್ದರು.  ಕಾರ್ಯಕ್ರಮದಲ್ಲಿ ಮಾನವ ಕಳ್ಳ ಸಾಗಾಣಿಕೆಯ ದುಷ್ಪರಿಣಾಮಗಳು, ತಡೆಗಟ್ಟುವ ಕ್ರಮಗಳು ಹಾಗೂ ಕಾನೂನು ಅರಿವು ಕುರಿತು ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಬಸವರಾಜ್ ದೊಡಮನಿ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಮಾಂತೇಶ್ ದೊಡಮನಿ, ಆಡಳಿತಾಧಿಕಾರಿ ಬಿ.ಜಿ. ಬಿರಾದಾರ್, ಎಸ್‌ಎಸ್ವಿವಿ ಸಂಘದ ಕಾರ್ಯದರ್ಶಿ ರವಿ ನಾಯಕ್, ಕಾಲೇಜಿನ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. 


ಸುದ್ದಿ ಓದಿ