ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ

ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ  Awareness rally against narcotics

ಲೋಕದರ್ಶನ ವರದಿ  

ದಾಂಡೇಲಿ 29: ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಸ್ಥಳೀಯ ಪೊಲೀಸ್ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ಜಾಥಾ ಆಯೋಜಿಸಲಾಯಿತು.  

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಡಿವೈಎಸ್ಪಿ ಶಿವಾನಂದ ಮದರಕಂಡಿ ಅವರು, ಇಂದಿನ ಯುವಜನತೆ ಮಾದಕ ವಸ್ತುಗಳು ಹಾಗೂ ನಶೆ ಉಂಟುಮಾಡುವ ಪದಾರ್ಥಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಕರೆ ನೀಡಿದರು.  

ಜಾಥಾದಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ವಿರೋಧಿ ಘೋಷಣೆಗಳನ್ನು ಕೂಗಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.  

ಕಾರ್ಯಕ್ರಮದಲ್ಲಿ ಸಿಪಿಐ ಶಿವಾನಂದ ಅಂಬಿಗೇರ, ಪಿಎಸ್‌ಐಗಳಾದ ಅಮೀನ್ ಅತ್ತಾರ, ಕಿರಣ ಪಾಟೀಲ, ಶಿವಾನಂದ ನಾವಟಗಿ, ಮಂಜುಳಾ ರಾವೋಜಿ, ಕಾಲೇಜಿನ ಪ್ರಾಚಾರ್ಯ ಗುಂಟೂರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.