ಅಂಕಲಿ ಗ್ರಾಮದಲ್ಲಿ ಎಸ್‌ಐಆರ್-2026 ಕುರಿತು ಜಾಗೃತಿ ಜಾಥಾ
Awareness rally on SIR-2026 in Ankali village
ಲೋಕದರ್ಶನ ವರದಿ
ಮಾಂಜರಿ 15: ಅಕ್ಕೋಡಿ ತಾಲ್ಲೂಕಿನ ಅಂಕಲಿ ಗ್ರಾಮದಲ್ಲಿರುವ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಪದವಿ ಮಹಾವಿದ್ಯಾಲಯದಲ್ಲಿ ರಾಜ್ಯಶಾಸ್ತ್ರ ವಿಭಾಗ, ಮತದಾರರ ಸಾಕ್ಷರತಾ ಕ್ಲಬ್ ಹಾಗೂ ಮತದಾನದ ಜಾಗೃತಿ ವೇದಿಕೆಯ ನೇತೃತ್ವದಲ್ಲಿ ಬುಧವಾರ "ವಿಶೇಷ ಮತದಾರರ ಪರಿಷ್ಕರಣೆ (ಖಋ-2026)" ಕುರಿತು ಜಾಗೃತಿ ಜಾಥಾವನ್ನು ಆಯೋಜಿಸಲಾಯಿತು.
ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಂ.ಎಸ್. ಕಾನಡೆ ಅವರು, ಮತದಾನವು ಪ್ರತಿಯೊಬ್ಬ ಪ್ರಜೆಯ ಮೂಲಭೂತ ಕರ್ತವ್ಯವಾಗಿದ್ದು, ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಾಥಾದ ವೇಳೆ ವಿದ್ಯಾರ್ಥಿಗಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸುವ ಕುರಿತು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಮತದಾರರ ಸಾಕ್ಷರತಾ ಕ್ಲಬ್ ಸಂಯೋಜಕಿ ಶ್ರೀಮತಿ ಪಿ.ಎ. ಕಾಟೆ, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಎ.ಕೆ. ಪಾಟೀಲ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ 