ಜನಸಂಖ್ಯೆ ನಿಯಂತ್ರಣದ ಕುರಿತು ಜಾಗೃತಿ ಜಾಥಾ
Awareness rally on population control
ವಿಜಯನಗರ (ಹೊಸಪೇಟೆ) 18: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಶನಿವಾರ ಜನಸಂಖ್ಯೆ ನಿಯಂತ್ರಣ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅಧಿಕಾರಿಗಳು, ಜನಸಂಖ್ಯೆ ನಿಯಂತ್ರಣವು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಈ ಅಭಿಯಾನದ ಮೂಲಕ ನಿರಂತರವಾಗಿ ಜನಸಂಖ್ಯೆ ನಿಯಂತ್ರಣ ಹಾಗೂ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸುರಕ್ಷಿತ ಸಮಯದಲ್ಲಿ ಗರ್ಭಧಾರಣೆ ಮಾಡಿಕೊಳ್ಳುವುದು ಹಾಗೂ ಒಂದು ಮಗುವಿನ ಜನನದ ನಂತರ ಮತ್ತೊಂದು ಮಗುವಿನ ಜನನದ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವುದು ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು. ಅನಗತ್ಯ ಗರ್ಭಧಾರಣೆಯನ್ನು ತಡೆಯಲು ಆರೋಗ್ಯ ಇಲಾಖೆಯಲ್ಲಿ ಲಭ್ಯವಿರುವ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ಯೋಜನಾ ವಿಧಾನಗಳು, ಚುಚ್ಚುಮದ್ದು ಮತ್ತು ಗರ್ಭನಿರೋಧಕ ಮಾತ್ರೆಗಳನ್ನು ಬಳಸಿಕೊಳ್ಳಬಹುದು. ಕುಟುಂಬ ಯೋಜನೆ ಕೇವಲ ಮಹಿಳೆಯರಿಗೆ ಮಾತ್ರ ಸೀಮಿತವಲ್ಲ. ಪುರುಷರೂ ಸಹ ಸುರಕ್ಷಿತ ಸಂತಾನಹರಣ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಮಹಿಳೆಯರ ಆರೋಗ್ಯ ರಕ್ಷಣೆಯಲ್ಲಿ ಸಹಕರಿಸಬೇಕು ಎಂದು ಹೇಳಿದರು.
ಅನಗತ್ಯ ಗರ್ಭಧಾರಣೆಯಿಂದ ಮುಂದಿನ ದಿನಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಮಸ್ಯೆಗಳನ್ನು ತಡೆಯಲು ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ. ಆರೋಗ್ಯವಂತ ಸಮಾಜ ಹಾಗೂ ಭವ್ಯ ಭಾರತದ ನಿರ್ಮಾಣಕ್ಕೆ ಜನಸಂಖ್ಯೆ ನಿಯಂತ್ರಣ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಜಾಥಾವು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ (ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣ)ದಿಂದ ಆರಂಭವಾಗಿ ಪುಣ್ಯಮೂರ್ತಿ ವೃತ್ತ, ಬಸ್ ನಿಲ್ದಾಣ, ಡಾ. ಪುನೀತ್ ರಾಜ್ ಕುಮಾರ್ ವೃತ್ತ, ಅಂಬೇಡ್ಕರ್ ವೃತ್ತ ಮಾರ್ಗವಾಗಿ ದೊಡ್ಡ ಮಸೀದಿ ರಸ್ತೆಯ ಮೂಲಕ ಸಾಗಿತು. ಬಳಿಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಸಮಾಪ್ತಿಗೊಂಡಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ. ಜಂಬಯ್ಯ, ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ವಿನಯ್, ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಧಿಕಾ, ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ಕ್ಷಯರೋಗ ನಿರ್ಮೂಲನಾ ಅಧಿಕಾರಿ ಭಾಸ್ಕರ್, ಆರೋಗ್ಯ ನೀರೀಕ್ಷಣಾಧಿಕಾರಿ ಧರ್ಮನ್ ಗೌಡ, ತಾಲೂಕು ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭಾಗವಹಿಸಿದ್ದರು.
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ 