ವಿಜಯಪುರ

ಮಕ್ಕಳ ಹಕ್ಕುಗಳ ರಕ್ಷಣೆ- ಸುರಕ್ಷತೆ ಕುರಿತು ಜಾಗೃತಿ ಅಗತ್ಯ: ಅರವಿಂದ ಎಸ್‌. ಹಾಗರಗಿ

ಮಕ್ಕಳ ಹಕ್ಕುಗಳ ರಕ್ಷಣೆ- ಸುರಕ್ಷತೆ ಕುರಿತು ಜಾಗೃತಿ ಅಗತ್ಯ: ಅರವಿಂದ ಎಸ್‌. ಹಾಗರಗಿ

ಲೋಕದರ್ಶನ ವರದಿ 

             ವಿಜಯಪುರ 28 : ಮಕ್ಕಳ ಹಕ್ಕುಗಳ ರಕ್ಷಣೆ- ಬಾಲ್ಯ ವಿವಾಹ ತಡೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ನಿಯಂತ್ರಣದ ಜೊತೆಗೆ ವೈಯಕ್ತಿಕ ಮತ್ತು ಸೈಬರ್ ಸುರಕ್ಷತೆಯ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್‌. ಹಾಗರಗಿ ಹೇಳಿದರು. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಜಯಪುರದ ರಾಮಕೃಷ್ಣ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಬುಧವಾರ ರಾಮಕೃಷ್ಣ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿಹಮ್ಮಿಕೊಂಡಿದ್ದ ಸುರಕ್ಷಿತ ಬಾಲ್ಯ ಅಭಿಯಾನಹಿಕಾನೂನು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

               ಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದುವುದರೊಂದಿಗೆ ಅವುಗಳ ರಕ್ಷಣೆಗೆ ಲಭ್ಯವಿರುವ ಕಾನೂನು ಮತ್ತು ನೆರವು ಕುರಿತು ತಿಳಿದುಕೊಳ್ಳಬೇಕು. ಮಕ್ಕಳ ಮೇಲಿನ ದೌರ್ಜನ್ಯ, ಬಾಲ್ಯ ವಿವಾಹ ಹಾಗೂ ವಿವಿಧ ರೀತಿಯ ಶೋಷಣೆಗಳನ್ನು ತಡೆಗಟ್ಟಲು ಸಮಾಜದ ಎಲ್ಲ ವರ್ಗದವರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಮಕ್ಕಳ ವೈಯಕ್ತಿಕ ಸುರಕ್ಷತೆ, ಸೈಬರ್ ಸುರಕ್ಷತೆ, ಆನ್‌ಲೈನ್ ವಂಚನೆಗಳಿಂದ ರಕ್ಷಿಸಿಕೊಳ್ಳುವ ವಿಧಾನಗಳು, ಮಕ್ಕಳ ಆರೋಗ್ಯ ಮತ್ತು ಮಾನಸಿಕ ಸ್ಥಿತಿ, ಚೈಲ್ಡ್‌ಲೈನ್ ಸೇವೆಗಳು, ಮಾನಸಿಕ ಒತ್ತಡ, ಪರೀಕ್ಷಾ ಭಯ, ಸ್ವಚ್ಛತೆ ಮತ್ತು ಆರೋಗ್ಯ, ಸಾಮಾಜಿಕ ಸುರಕ್ಷತೆ ಹಾಗೂ ರಸ್ತೆ ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಿದರು.  


ಸುದ್ದಿ ಓದಿ