ಕ್ರೀಡಾಕೂಟದಲ್ಲಿ ಬಿ. ಎಂ. ಪಾಟೀಲ ವೈದ್ಯಕೀಯ ವಿದ್ಯಾರ್ಥಿಗಳ ಸಾಧನೆ
B. M. Patil Medical Students' Achievements in Sports Meet
ವಿಜಯಪುರ 13: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗದ ವಿದ್ಯಾರ್ಥಿಗಳು ಪುಣೆಯ ಆರ್ಮ್ಡ ಫೋರ್ಸಸ್ ಮೆಡಿಕಲ್ ಕಾಲೇಜಿನಲ್ಲಿ ಮೇ 6ರಿಂದ 9ರವರೆಗೆ ಆಯೋಜಿಸಲಾದ ಸಿಲ್ಹೌಟ್ಟೀಸ್-2026(ಖಋಊಓಗಇಖಿಖಿಇಖ 2026) ಅಂತರ ಕಾಲೇಜು ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಈ ಕ್ರೀಡಾಕೂಟದಲ್ಲಿ ವಿಶ್ವವಿದ್ಯಾಲಯದ ಒಟ್ಟು 44 ವಿದ್ಯಾರ್ಥಿಗಳ ತಂಡ ಅಥ್ಲೆಟಿಕ್ಸ್, ಕ್ರಿಕೆಟ್, ಫುಟ್‌ಬಾಲ್ ಹಾಗೂ ವಾಲಿಬಾಲ್ ಸ್ಪರ್ಧೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದೆಮಅಥ್ಲೆಟಿಕ್ಸ್ ವಿಭಾಗದ ರಿಲೇ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಮೂರು ವಿಭಾಗಗಳಲ್ಲಿ ಬೆಳ್ಳಿ ಪದಕ ಗೆದ್ದು ವಿಶ್ವವಿದ್ಯಾಲಯಕ್ಕೆ ಹೆಮ್ಮೆ ತಂದಿದ್ದಾರೆ.4ಥ100 ಮೀಟರ್ ರಿಲೇ ಮಹಿಳಾ ವಿಭಾಗದಲ್ಲಿ ದ್ವಿತೀಯ ಸ್ಥಾನಡೆಲಿಲಾ, ಸುಹಾನಿ, ತೇಜಸ್ವಿನಿ ಹಾಗೂ ರೇಖಾ ಅವರನ್ನೊಳಗೊಂಡ ತಂಡ ಉತ್ತಮ ಸಾಧನೆ ಮಾಡಿದೆ. ಇದೇ ವೇಳೆ 4ಥ400 ಮೀಟರ್ ರಿಲೇ ಪುರುಷರ ವಿಭಾಗದಲ್ಲಿಮಿಥಾನ್ಶು ಪಾಟೀಲ, ಹರ್ಷ, ಪದ್ಮೇಶ್ ಪಾಟೀಲ ಹಾಗೂ ವಿಜಯ ಲಾಂಡೆ ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದಿದೆ. 4ಥ100 ಮೀಟರ್ ರಿಲೇ ಪುರುಷರ ವಿಭಾಗದಲ್ಲಿಮಿಥಾನ್ಷು ಪಾಟೀಲ, ಹರ್ಷ, ಪದ್ಮೇಶ್ ಪಾಟೀಲ್ ಹಾಗೂ ಪ್ರಣವ ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಪಡೆದು ಗಮನ ಸೆಳೆದಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಕುಲಸಚಿವ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ವಿಭಾಗದ ಡೀನ್ ಹಾಗೂ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ, ಅಲೈಡ್ ಹೆಲ್ತ್ ಸೈನ್ಸಸ್ ವಿಭಾಗದ ಡೀನ್ ಡಾ. ಎಸ್. ವಿ. ಪಾಟೀಲ, ವಿದ್ಯಾರ್ಥಿ ಕಲ್ಯಾಣ ಹಾಗೂ ಕ್ರೀಡಾ ವಿಭಾಗದ ಡೀನ್ ಡಾ. ಗೀರೀಶ ಕುಲ್ಲೊಳ್ಳಿ ಹಾಗೂ ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.ವಿದ್ಯಾರ್ಥಿಗಳಿಗೆ ನಿರಂತರ ಪ್ರೋತ್ಸಾಹ, ಮಾರ್ಗದರ್ಶನ ಹಾಗೂ ಬೆಂಬಲ ನೀಡಿದ ಪರಿಣಾಮ ಈ ಸಾಧನೆ ಸಾಧ್ಯವಾಗಿದ್ದು, ಈ ಯಶಸ್ಸು ವಿಶ್ವವಿದ್ಯಾಲಯದ ಕ್ರೀಡಾ ಪರಂಪರೆಯನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ದಿದೆ ಎಂದು ಅವರು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 