ಪಿಎಸ್ಐ ಆನಂದ ಕಾರಕಟ್ಟಿ ಅವರನ್ನು ಸನ್ಮಾನಿಸಿದ ಬಿ.ಟಿ. ಚಂದ್ರಶೇಖರ್
B.T. Chandrashekhar felicitated PSI Anand Karakatti
ಲಕ್ಷ್ಮೇಶ್ವರ, ಸೆ. 6: ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 8ಹಿ10 ತಿಂಗಳಿಂದ ಕ್ಷೇತ್ರದ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಅವುಗಳ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುತ್ತಿರುವುದಾಗಿ ರಾಜ್ಯ ರೈತೋದಯ ಹಸಿರು ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಟಿ. ಚಂದ್ರಶೇಖರ್ ಹೇಳಿದರು.
ತಾಲೂಕಿನ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹದಗೆಟ್ಟಿರುವ ರಸ್ತೆಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ನೀರಾವರಿಗೆ ಆದ್ಯತೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳು ಮತ್ತು ಸಂಬಂಧಿಸಿದ ಸಚಿವರಿಗೆ ಮನವಿ ಸಲ್ಲಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ತಾಲೂಕಿನ ಅಭಿವೃದ್ಧಿಯ ಕುರಿತು ಗಮನ ಸೆಳೆಯಲು ಹಾಗೂ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಸೇವಾ ಆಕಾಂಕ್ಷಿಯಾಗಿ ತಾಲೂಕಿನಲ್ಲಿ ಸಂಚರಿಸುತ್ತಿರುವ ಚಂದ್ರಶೇಖರ್ ಅವರು, ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಪಿಎಸ್ಐ ಅಧಿಕಾರಿಯಾಗಿ ಕರ್ತವ್ಯ ವಹಿಸಿಕೊಂಡಿರುವ ಆನಂದ ಕಾರಕಟ್ಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ರಾಜ್ಯ ರೈತೋದಯ ಹಸಿರು ಸೇನೆಯ ರಾಜ್ಯ ಸಂಚಾಲಕರಾದ ಲಕ್ಷ್ಮವ್ವ ಒಡೆಯರ, ಮಲ್ಲಾಪುರ ಭೋವಿ ಸಮಾಜದ ಮುಖಂಡ ಯಲ್ಲಪ್ಪ ಕೊರದಾಳ, ರಾಜು ಕಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 