ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ಬಿ.ಟಿ. ಚಂದ್ರಶೇಖರ್

ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ಬಿ.ಟಿ. ಚಂದ್ರಶೇಖರ್  B.T. Chandrashekhar listens to the grievances of wage laborers.

ಕೂಲಿ ಕಾರ್ಮಿಕರ ಸಮಸ್ಯೆ ಆಲಿಸಿದ ಬಿ.ಟಿ. ಚಂದ್ರಶೇಖರ್  

ಮುಂಡರಗಿ, 11: ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಸೇವಾಕಾಂಕ್ಷಿ ಹಾಗೂ ರಾಜ್ಯ ರೈತೋದಯ ಹಸಿರು ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ **ಬಿ.ಟಿ. ಚಂದ್ರಶೇಖರ್** ಅವರು ತಾಲ್ಲೂಕಿನ ಹಮ್ಮಿಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದ **ವಿಕಸಿತ ಭಾರತ ಉದ್ಯೋಗ ಖಾತ್ರಿ ಯೋಜನೆ** ಅಡಿಯಲ್ಲಿ ನಡೆಯುತ್ತಿದ್ದ ಕೂಲಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.  

ಕೂಲಿ ಕಾರ್ಮಿಕರೊಂದಿಗೆ ಸಮಗ್ರವಾಗಿ ಮಾಹಿತಿ ಪಡೆದುಕೊಂಡ ಅವರು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಬಡ ಕಾರ್ಮಿಕರಿಗೆ ಪಂಚಾಯಿತಿಯಿಂದ ಕುಡಿಯುವ ನೀರು, ನೆರಳಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒತ್ತಾಯಿಸಿದರು.  

ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಎದುರಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಕೈಗೊಂಡಿರುವುದು ಗ್ರಾಮೀಣ ಜನರಿಗೆ ಅನುಕೂಲವಾಗಿದೆ. ಇಂತಹ ಯೋಜನೆಗಳು ನಿರಂತರವಾಗಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಜೊತೆಗೆ ಕೂಲಿ ಕಾರ್ಮಿಕರಿಗೆ **ಸಕಾಲದಲ್ಲಿ ಕೂಲಿ ಹಣ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು** ಎಂದು ಚಂದ್ರಶೇಖರ್ ತಿಳಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಹಾಗೂ ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.