ಬೆಂಗಳೂರು: ಕಾಸರಗೋಡು ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ
ಬೆಂಗಳೂರು 07: ಯುವತಿಯೊಬ್ಬರನ್ನು ನಗರಕ್ಕೆ ಕರೆತಂದು ಅತ್ಯಾಚಾರವೆಸಗಿ ಬೆದರಿಸಿ ಮತಾಂತರಕ್ಕೆ ಯತ್ನಿಸಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.
ಸಂತ್ರಸ್ತೆಗೆ ನ್ಯಾಯ ಒದಗಿಸಿಕೊಡುವಂತೆ ಸಂಸದೆ ಶೋಭಾ ಕರಂದ್ಲಾಜೆ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.
ಸಂತ್ರಸ್ತ ಯುವತಿಯು ನೀಡಿದ ದೂರಿನನ್ವಯ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿದ್ದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಕೇರಳದ ಕಾಸರಗೋಡಿನ ಯುವತಿಯನ್ನು ನಗರಕ್ಕೆ ಕರೆತಂದಿದ್ದ ಕೇರಳದ ರಿಷಬ್ (23) ಹಾಗೂ ಆರೋಪಿಗಳಿಗೆ ಉಳಿದುಕೊಳ್ಳಲು ಜಾಗ ನೀಡಿದ ಅನ್ಸರ್ ಅಲಿಯಾಸ್ ನಾಸೀರ್‌ನನ್ನು ಪ್ರಕರಣದ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದರು.
ಕೃತ್ಯದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ನಡೆಸಿದ ಬೆನ್ನಲ್ಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದ್ದು, ಇಲ್ಲಿಯವರೆಗಿನ ತನಿಖೆಯ ವಿವರಗಳನ್ನು ಸಿಐಡಿ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದು ಡಿಸಿಪಿ ಇಶಾಪಂತ್ ತಿಳಿಸಿದ್ದಾರೆ.
ರಿಷಬ್ ಮತ್ತೊಬ್ಬ ಆರೋಪಿಯ ಜತೆ ಸೇರಿ ಕಾಸರಗೋಡು ಮೂಲದ ಯುವತಿಯನ್ನು ನಗರಕ್ಕೆ ಕರೆದುಕೊಂಡು ಬಂದು ಬಂಧಿತ ನಾಸೀರ್ ಎಂಬಾತನ ಪರಪ್ಪನ ಅಗ್ರಹಾರದ ಮನೆಯಲ್ಲಿಟ್ಟುಕೊಂಡು ಅತ್ಯಾಚಾರವೆಸಗಿದ್ದರು.
ಅತ್ಯಾಚಾರದ ಬಗ್ಗೆ ದೂರು ನೀಡದಂತೆ ಬೆದರಿಸಿದ್ದ ಆರೋಪಿಗಳು, ಆಕೆಯನ್ನು ಮತಾಂತರ ನಡೆಸಲು ಯತ್ನಿಸಿದ್ದರು. ಸಂತ್ರಸ್ತ ಯುವತಿ ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ನೋವು ತೋಡಿಕೊಂಡಿದ್ದು, ಆಕೆಯನ್ನು ಸಂಸದರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿಗೆ ಕರೆದೊಯ್ದು, ಘಟನೆಯ ಬಗ್ಗೆ ವಿವರಿಸಿದ್ದರು.
ಇದಲ್ಲದೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೂ ಸಂತ್ರಸ್ತ ಯುವತಿಯು ಕಳೆದ ಭಾನುವಾರ ದೂರು ನೀಡಿ ಕಾಸರಗೋಡಿನ ಯುವಕರಿಬ್ಬರು ನನ್ನ ಮೇಲೆ ಅತ್ಯಾಚಾರವೆಸಗಿ ಅವರ ಧರ್ಮಕ್ಕೆ ಮತಾಂತರವಾಗುವಂತೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದರು.
ದುಷ್ಕರ್ಮಿಗಳು ಎಲೆಕ್ಟ್ರಾನಿಕ್ ಸಿಟಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅವರನ್ನು ಬಂಧಿಸಿ.ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಭಾಸ್ಕರ್‌ರಾವ್ ಅವರು ತನಿಖೆ ನಡೆಸುವಂತೆ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 