ಹಿರೇಕೆರೂರು ಸೀಲ್ಡೌನ್ ಮಾಡಲು ಬಿ.ಸಿ.ಪಾಟೀಲ್ ಮನವಿ
ಹಾವೇರಿ, ಜೂ 30: ಹಿರೇಕೆರೂರು ಕ್ಷೇತ್ರದಲ್ಲಿ ಕೊರೊನಾ ಮಹಾಮಾರಿ ತೀವ್ರವಾಗಿದ್ದು, ಹಿರೆಕೆರೂರು ಪಟ್ಟಣವನ್ನು ಸೀಲ್ ಡೌನ್ ಮಾಡುವಂತೆ ಕೃಷಿ ಸಚಿವರೂ ಆಗಿರುವ ಹಿರೇಕೆರೂರು ಮತಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.ಕೊರೋನಾದಿಂದ ಬಚಾವ್ ಆಗಲು ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸುವ ಜೊತೆಗೆ ಜನತೆ ಎಚ್ಚೆತ್ತುಕೊಳ್ಳಬೇಕು. ಕೊರೊನಾ ಮಹಾಮಾರಿ ತಮ್ಮ ಮತಕ್ಷೇತ್ರಕ್ಕೂ ಲಗ್ಗೆಯಿಟ್ಟಿದ್ದು,ಕೋವಿಡ್-19ಸಾಮೂದಾಯಕ್ಕೆ ಪಸರಿಸುತ್ತಿದೆ.
ಕ್ಷೇತ್ರದ ಗ್ರಾಮೀಣ ಭಾಗಗಳಾದ ಗುಡ್ಡದಮಾದಾಪುರ, ಕೋಡ, ಸುತ್ತುಕೋಟೆ, ಎಮ್ಮಿಗೆರೆ ಸೇರಿದಂತೆ ವಿವಿಧ ಭಾಗಗಳಿಗೂ ವ್ಯಾಪಿಸಿದೆ.ಪ್ರತಿಯೊಬ್ಬರ ಜೀವ ಅವರವರ ಕೈಯಲ್ಲಿಯಿದೆ.ಜನತೆ ಆದಷ್ಟು ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.ಯಾರಿಗಾದರೂ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅಥವಾ ಶೀತ, ಜ್ವರ, ಕೆಮ್ಮಿನಂತಹ ಲಕ್ಷಣ ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆಗೊಳಪಡಬೇಕು. ಅಗತ್ಯವಿದ್ದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು. ನಮ್ಮ ಜೀವಕ್ಕೆನಾವೇ ಹೊಣೆ.ಆದಷ್ಟು ಸುರಕ್ಷತಾ ಕ್ರಮ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 