ಕನಕದಾಸ ಪತ್ತಿನ ಸಹಕಾರಿ ಸಂಘಕ್ಕೆ ಬಿಡಿಸಿಸಿ ಬ್ಯಾಂಕಿನ ಪ್ರಶಸ್ತಿ
ಮಹಾಲಿಂಗಪುರ: ಕಳೆದ 20 ವರ್ಷಗಳಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣದ ಕನಕದಾಸ ಪತ್ತಿನ ಸಹಕಾರಿ ಸಂಘಕ್ಕೆ ಬಾಗಲಕೋಟೆಯ ಡಿಸಿಸಿ ಬ್ಯಾಂಕಿನಿಂದ ಕೊಡಮಾಡುವ 2022-23ನೇ ಸಾಲಿನ ಬಾಗಲಕೋಟೆ ಜಿಲ್ಲೆಯ ಉತ್ತಮ ಕೃಷಿಯೇತರ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ.
ಸನ್ 2022-23ನೇ ಸಾಲಿನಲ್ಲಿ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನ ಪಡೆಯುವ ಮೂಲಕ ಬಾಗಲಕೋಟೆ ಜಿಲ್ಲೆಯ ಉತ್ತಮ ಕೃಷಿಯೇತರ ಪತ್ತಿನ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾಗಿದೆ. ಇದೇ ಅ.26ರ ಶನಿವಾರ ಬಾಗಲಕೋಟೆಯ ಕಲಾಭವನದಲ್ಲಿ ನಡೆಯಲಿರುವ ಡಿಸಿಸಿ ಬ್ಯಾಂಕಿನ 21ನೇ ವಾಷರ್ಿಕ ಮಹಾಸಭೆಯಲ್ಲಿ ಕನಕದಾಸ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹಾಲಿಂಗಪ್ಪ ಜಕ್ಕನ್ನವರ, ಮುಖ್ಯಕಾರ್ಯನಿರ್ವಾಹಕ ಪ್ರಭು ಹುಬ್ಬಳ್ಳಿಯವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.