ಬಿಇಓ ಎಚ್ ನಾಣಕೀ ನಾಯ್ಕ ಅವರಿಗೆ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ
BEO H Nanaki Naik gets State Education Service Ratna Award
ಲಕ್ಷ್ಮೇಶ್ವರ 31: ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ನಾಣಕೀ ನಾಯ್ಕ ಅವರಿಗೆ ವಿಶ್ವ ವಿಜಯ ಪತ್ರಿಕೆಯ 21ನೇ ವರ್ಷಾಚರಣೆ ಅಂಗವಾಗಿ 2025 -26- ನೇ ಸಾಲಿನ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಕೊಡ ಮಾಡುವ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಶಿರಹಟ್ಟಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಶಿಕ್ಷಕ ವೃಂದದವರೊಂದಿಗೆ ಒಳ್ಳೆಯ ಪ್ರೀತಿ-ವಿಶ್ವಾಸ ಉತ್ತಮ ಬಾಂಧವ್ಯದೊಂದಿಗೆ ಪ್ರಸ್ತುತ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರಾಂಕಿಂಗ್ ಪಡೆಯಬೇಕು ಎಂಬ ಉದ್ದೇಶದಿಂದ ಎರಡು ತಾಲೂಕಿನಲ್ಲಿ ಎಲ್ಲ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಮತ್ತು ಶಾಲೆಯ ಎಲ್ಲ ಶಿಕ್ಷಕ ವೃಂದದವರೊಂದಿಗೆ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರ ಸದಸ್ಯರೊಂದಿಗೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪಾಲಕರೊಂದಿಗೆ ಗ್ರಾಮಸ್ಥರ ಸಹಕಾರದೊಂದಿಗೆ ಗ್ರಾಮ ವಾಸ್ತವ್ಯ ಓದಿನ ಮನೆ ನಮ್ಮ ನಡೆ ಓದಿನ ಕಡೆ ಸೇರಿದಂತೆ ಹಲವಾರು ವಿಶೇಷ ಕಾರ್ಯಕ್ರಮಗಳೊಂದಿಗೆ ಎರಡು ತಾಲೂಕಿನಲ್ಲಿ ಕಾಲಿಗೆ ಚಕ್ರವನ್ನು ಕಟ್ಟಿಕೊಂಡು ಹಗಲು ರಾತ್ರಿ ಎನ್ನದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಉತ್ತಮ ರಾಂಕಿಂಗ್ ಪಡೆಯಂತಾಗಲಿ ಎಂದು ನಿರಂತರ ಪ್ರಯತ್ನ ಹಾಗೂ ಎರಡು ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಆಟದ ಮೈದಾನ ಉತ್ತಮ ಶಿಕ್ಷಣ ವಿದ್ಯಾರ್ಥಿಗಳ ಯೋಗ ಕ್ಷೇಮ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿರುವುದನ್ನು ಗುರುತಿಸಿ ವಿಶ್ವ ವಿಜಯ ಪತ್ರಿಕೆಯವರು ತಮ್ಮ 21ನೇ ವರ್ಷಾಚರಣೆಯ ಅಂಗವಾಗಿ 26.4.2026ರಂದು ಡಾ ಬಿ ಆರ್ ಅಂಬೇಡ್ಕರ ಸಭಾಭವನ ಸಂಗೊಳ್ಳಿ ರಾಯಣ್ಣ ನಗರ ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡುವರು ರಾಜ್ಯ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್ ನಾಣಕೀ ನಾಯ್ಕ ಅವರಿಗೆ ಲಕ್ಷ್ಮೇಶ್ವರ ಪಟ್ಟಣದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ಪ್ರಧಾನ ಗುರುಗಳಾದ ಬಸವರಾಜ ಕುಂಬಾರ ಅವರು ಹಾಗೂ ಶಿರಹಟ್ಟಿ ಲಕ್ಷ್ಮೇಶ್ವರ ಅವಳಿ ತಾಲೂಕಿನ ಎಲ್ಲ ಶಿಕ್ಷಕರಿಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 