ಕೊರೊನಾ ಭೀತಿ : ಬಯೋಮೆಟ್ರಿಕ್ ರದ್ದು
ಇಂಫಾಲ, ಮಾ 7, ಕೊರೊನ ವೈರಾಣು ಸೋಂಕು ಹರಡದಂತೆ ತಡೆಯಲು ಮುಂಜಾಗರೂಕತಾ ಕ್ರಮವಾಗಿ ತಕ್ಷಣದಿಂದ ಅನ್ವಯವಾಗುವಂತೆ ಸರಕಾರಿ ಕಚೇರಿಗಳಲ್ಲಿ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ಒಂದು ತಿಂಗಳ ಮಟ್ಟಿಗೆ ರದ್ದುಗೊಳಿಸಿರುವುದಾಗಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಕೊರೊನ ವೈರಸ್ ವಿರುದ್ಧ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡಿದೆ ಎಂದರು. ರಾಜ್ಯದ ಆರೋಗ್ಯ ಇಲಾಖೆ ಜನವರಿ 18 ರಿಂದಲೇ ಸೂಕ್ತ ಕ್ರಮ ಕೈಗೊಂಡಿರುವುದರಿಂದ ರಾಜ್ಯದಲ್ಲಿ ಇದುವರೆಗೆ ಕೊರೊನ ವೈರಸ್ ಸೋಂಕು ಪ್ರಕರಣ ದಾಖಲಾಗಿಲ್ಲ ಎಂದು ಅವರು ತಿಳಿಸಿದರು. ಇಂಫಾಲದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು ರಾಜ್ಯವನ್ನು ಪ್ರವೇಶಿಸುವ ಸ್ಥಳಗಳಲ್ಲೂ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ರಾಜ್ಯಕ್ಕೆ ಭೇಟಿ ನೀಡಬಯಸುವವರು ಭಾರತ-ಮ್ಯಾನ್ಮಾರ್ ಗಡಿ ಸೇರಿದಂತೆ ರಾಜ್ಯವನ್ನು ಪ್ರವೇಶಿಸುವ ಸ್ಥಳಗಳಲ್ಲಿ ನೀಡುವ ಅರ್ಜಿಯನ್ನು ಭರ್ತಿ ಮಾಡಬೇಕು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 