ಬಿಜೆಪಿ 140 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ: ಬಿಎಸ್ವೈ
ಲೋಕದರ್ಶನ ವರದಿ
ಚಿಕ್ಕೋಡಿ 08: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಪ್ರಸಕ್ತ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ ರಂತಹ ಸಮರ್ಥ ನಾಯಕರು ಇರುವಾಗ ಕಾಂಗ್ರೆಸ್ನ ರಾಹುಲ ಗಾಂಧಿ ಯಾವ ಲೆಕ್ಕ, ದೇಶ ಮುನ್ನಡೆಸುಕೊಂಡು ಹೋಗುವ ಎದೆಗಾರಿಕೆ ಇರುವುದು ನರೇಂದ್ರ ಮೋದಿ ಕಡೆ ಮಾತ್ರ. ಹೀಗಿರುವಾಗ ರಾಜ್ಯದ ಜನ ಬಿಜೆಪಿಗೆ ಬೆಂಬಲಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಬಿಜೆಪಿ ಅಧಿಕಾರಕ್ಕೆ ತರಬೇಕೆನ್ನುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯದ ಉದ್ದಗಲಕ್ಕೂ ವಿಜಯ ಸಂಕಲ್ಪ ಯಾತ್ರೆ ಹಮ್ಮಿಕೊಂಡಿದೆ. ಯಾತ್ರೆಯಲ್ಲಿ ಜನರ ಉತ್ಸಾಹ ನೋಡಿದರೆ ಮುತ್ತೊಮ್ಮೆ ಕಮಲ ಅರುಳುವುದು ನಿಶ್ಚಿತವಾಗಿದೆ. ರಾಜ್ಯದಲ್ಲಿ ಮತ್ತು ಬೆಳಗಾವಿ ಜಿಲ್ಲೆಯಯಲ್ಲಿ ಪಕ್ಷದ ನಾಯಕರಲ್ಲಿ ಯಾವುದೇ ಬಿನ್ನಮತ ಕಾಣಿಸುವುದಿಲ್ಲ, ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಹೆಚ್ಚಿನ ಸ್ಥಾನ ಗೆಲ್ಲಿಸಲು ಪ್ರಯತ್ನ ಮಾಡಲಾಗುತ್ತದೆ ಎಂದರು.
ಚುನಾವಣೆ ಪೂರ್ವದಲ್ಲಿಯೇ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಗಾಗಿ ಪೈಪೋಟಿ ನಡೆಸುವುದು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಜನ ತಿರಸ್ಕಾರ ಮಾಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ. ಸಂಸದ ಅಣ್ಣಾಸಾಹೇಬ ಜೊಲ್ಲೆ, ಡಾ ಪ್ರಭಾಕರ ಕೋರೆ, ಲಕ್ಷ್ಮಣ ಸವದಿ, ಮಹಾಂತೇಶ ಕವಟಗಿಮಠ, ಎನ್.ರವಿಕುಮಾರ, ಡಾ, ರಾಜೇಶ ನೇರ್ಲ್ , ಮಹೇಶ ಭಾತೆ, ಎಂ.ಬಿ.ಜಿರಲಿ, ದುಂಡಪ್ಪ ಬೆಂಡವಾಡೆ, ಸತೀಶ ಅಪ್ಪಾಜಿಗೋಳ,ಸಂಜು ಕವಟಗಿಮಠ ಮುಂತಾದವರು ಇದ್ದರು