ಬೆಳಗಾವಿ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ 5ನೇ ದಿನಕ್ಕೆ

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ 5ನೇ ದಿನಕ್ಕೆ

  

ಬೆಳಗಾವಿ 21: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.  

ಧರಣಿಯ ವೇಳೆ ಕಾರ್ಯಕರ್ತರು ಭಜನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. “ನಾಗೇಂದ್ರ ರಾಜೀನಾಮೆ ನೀಡಲೇಬೇಕು”, “ರೈತರಿಗೆ ಪರಿಹಾರ ನೀಡದ ಸರ್ಕಾರಕ್ಕೆ ಧಿಕ್ಕಾರ” ಹಾಗೂ “ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ” ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಎಂ.ಬಿ. ಜಿರಲಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 


ಸುದ್ದಿ ಓದಿ