ಎಲಬುರ್ಗ

ಬಿಜೆಪಿ-ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರೆ​‍್ಡ : ರಾಯರಡ್ಡಿ

ಬಿಜೆಪಿ-ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಸೇರೆ​‍್ಡ : ರಾಯರಡ್ಡಿ

ಯಲಬುರ್ಗಾ 15: ಬಿಜೆಪಿ, ಜೆಡಿಎಸ್ ಪಕ್ಷವನ್ನು ತೊರೆದು ಪಟ್ಟಣ ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ಮಾಜಿ ಮಂತ್ರಿ ಬಸವರಾಜ ರಾಯರಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರೆ​‍್ಡಗೊಂಡರು. 

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸೇರೆ​‍್ಡ ಕಾರ್ಯಕ್ರಮದಲ್ಲಿ ಕಲ್ಲೂರು ಗ್ರಾಮದ ಜಂಗಮ ಸಮಾಜದ ಸಾಕಷ್ಟು ಜನ ಸೇರಿದಂತೆ ಕ್ಷೇತ್ರದ ವಿವಿಧ ಗ್ರಾಮದಿಂದ ಬಿಜೆಪಿ, ಜೆಡಿಎಸ್ ಪಕ್ಷದ ನೂರಾರು ಕಾರ್ಯಕರ್ತರು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರೆ​‍್ಡಗೊಂಡರು. ಅವರನ್ನು ಪಕ್ಷದ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡು ಸ್ವಾಗತಿಸಿದರು.  ಈ ವೇಳೆ ಬ್ಲಾಕ್ ಕಾಂಗ್ರೆಸ್  ಪಕ್ಷದ ಅಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಹನಮಂತಗೌಡ ಪಾಟೀಲ್, ಮಹಿಳಾ ಘಟಕದ ಅಧ್ಯಕ್ಷೆ ಸಾವಿತ್ರಿ ಗೊಲ್ಲರ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ, ರಾಮಣ್ಣ ಸಾಲಭಾವಿ, ವೀರನಗೌಡ ಬಳೂಟಗಿ, ಕೆರಿಬಸಪ್ಪ ನಿಡಗುಂದಿ, ಆನಂದ ಉಳ್ಳಾಗಡ್ಡಿ, ಅಂದಾನಗೌಡ ಪೋಲೀಸ್ ಪಾಟೀಲ್, ಡಾ.ಶಿವನಗೌಡ ದಾನರೆಡ್ಡಿ, ಶರಣಪ್ಪ ಗಾಂಜಿ, ರಸೂಲಸಾಬ ಹಿರೇಮನಿ, ಮಲ್ಲು ಜಕ್ಕಲಿ, ಸುಧೀರ ಕೊರ್ಲಳ್ಳಿ, ಹಂಪಯ್ಯ ಹಿರೇಮಠ ಸೇರಿ ಪಕ್ಷದ ಕಾರ್ಯಕರ್ತರು ಇದ್ದರು. 


ಸುದ್ದಿ ಓದಿ