ಮುಂಡರಗಿ

8ರಂದು ಬಿಜೆಪಿ ಜನಸಂಕಲ್ಪ ಯಾತ್ರೆ: ಶಾಸಕ ರಾಮಣ್ಣ ಲಮಾಣಿ

8ರಂದು ಬಿಜೆಪಿ ಜನಸಂಕಲ್ಪ ಯಾತ್ರೆ: ಶಾಸಕ ರಾಮಣ್ಣ ಲಮಾಣಿ

ಮುಂಡರಗಿ 05:  ನವೆಂಬರ್ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರ​‍್ಪ ಇವರ ನೇತೃತ್ವದಲ್ಲಿ ಶಿರಹಟ್ಟಿ ಕ್ಷೇತ್ರದ ದಬಾಲಿ ಕಾಲೇಜು ಮೈದಾನದಲ್ಲಿ ಜರುಗುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕೆಂದು ಶಿರಹಟ್ಟಿ ಕ್ಷೇತ್ರದ ಶಾಸಕ ರಾಮಣ್ಣ ಲಮಾಣಿ ಹೇಳಿದರು. 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರ ವಿವಿಧ ಯೊಜನೆಗಳನ್ನು ಜಾರಿಗೆ ತರುವುದರ ಮೂಲಕ ರಾಜ್ಯದ ಬಡ ಜನತೆಯಲ್ಲಿರುವ ಬಡತನವನ್ನು ನೀಗಿಸುವಂತ ಹಾಗೂ ರೈತರಿಗೆ, ವಿವಿಧ ಸಮಾಜಕ್ಕೆ ಅನುಕೂಲಕರವಾದ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಭಲವಾದ ಸರ್ಕಾರವೆಂದರೆ ಅದು ಬಿಜೆಪಿ ಸರ್ಕಾರ. 

ಹಾಗೂ ಈ ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರದಂತೆ ವಾರ್ಷಿಕವಾಗಿ ಒಟ್ಟು 10 ಸಾವಿರ ಸಹಾಯಧನವನ್ನು ನೀಡುತ್ತಿರುವ ಬಿಜೆಪಿ ಸರ್ಕಾರದಿಂದ ರೈತರ ಸಂಕಷ್ಠವನ್ನು ಎದುರಿಸಲು ಆಸರೆಯಾಗಿದೆ. ಅಲ್ಲದೇ ಹಲವಾರು ದಿನಗಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಎಸ್‌.ಸಿ/ಎಸ್‌.ಟಿ ಸಮಾಜದ ಮೀಸಲಾತಿಯನ್ನು ಎಸ್‌.ಸಿ ಗೆ 15 ರಿಂದ 17ಅಕ್ಕೆ ಹಾಗೂ ಎಸ್‌.ಟಿ ಗೆ 3 ರಿಂದ 7ಅ ಕ್ಕೆ ಮೀಸಲಾತಿಯನ್ನು ಹೆಚ್ಚಿಗೆ ಮಾಡುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಕೊಡುಗೆ ನೀಡುವಲ್ಲಿ ಬಿಜೆಪಿ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಉತ್ತಮ ನಿರ್ದಾರವನ್ನು ತೆಗೆದುಕೊಂಡಿದ್ದಾರೆ. 

ಹೀಗಾಗಿ ಹಲವಾರು ಅಭಿವೃದ್ದಿಪರ ಕೆಲಸಗಳನ್ನು ಈ ರಾಜ್ಯಕ್ಕೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಶಿರಹಟ್ಟಿಯಲ್ಲಿ ನಡೆಯುವ ಬಿಜೆಪಿ ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ.ಪಾಟೀಲ್, ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ ಉದಾಸಿ, ಪ್ರಧೀಪ ಶೇಟ್ಟರ್ ಹಾಗೂ ವಿಪ ಸದಸ್ಯರಾದ ಎಸ್‌.ವಿ.ಸಂಕನೂರು, ಶಾಸಕ ಕಳಕಪ್ಪ ಬಂಡಿ, ರಾಮಣ್ಣ ಲಮಾಣಿಯವರು ಹಾಗೂ ಇನ್ನುಳಿದ ಬಿಜೆಪಿ ಮುಖಂಡರು ಉಪಸ್ಥಿತರಿರುತ್ತಾರೆ. ಹೀಗಾಗಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತರು ಶಿರಹಟ್ಟಿಯಲ್ಲಿ ನಡೆಯುವ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಹೇಳಿದರು. 

ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಹೇಮಗೀರೀಶ ಹಾವಿನಾಳ ಮಾತನಾಡಿ, ಶಿರಹಟ್ಟಿಯಲ್ಲಿ ಸಿ.ಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್‌.ಯಡಿಯೂರ​‍್ಪ ಇವರ ನೇತೃತ್ವದಲ್ಲಿ ಜರುಗುವ ಜನಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕ್ಷೇತ್ರದ ಪ್ರತಿಯೊಬ್ಬ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಈ ಯಾತ್ರೆಯಲ್ಲಿ ಸುಮಾರು 30 ಸಾವಿರ ಜನತೆ ಸೇರುವ ನೀರಿಕ್ಷೆ ಇದೆ. ಎಂದು ಮಾಹಿತಿ ನೀಡಿದರು. 

ಈ ವೇಳೆ ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ, ರವೀಂದ್ರ ಉಪ್ಪಿನಬೆಟಗೇರಿ, ಲಿಂಗರಾಜಗೌಡ ಪಾಟೀಲ್, ದೇವಪ್ಪ ಕಂಬಳಿ, ಕವಿತಾ ಉಳ್ಳಾಗಡ್ಡಿ, ಶಿವಪ್ಪ ಚಿಕ್ಕಣ್ಣವರ, ಕುಮಾರಸ್ವಾಮಿ ಹಿರೇಮಠ, ಸುಭಾಸ ಗುಡಿಮನಿ, ದೇವಪ್ಪ ಇಟಗಿ, ರಜನಿಕಾಂತ ದೇಸಾಯಿ, ನಾಗೇಶ ಹುಬ್ಬಳ್ಳಿ, ಚಿನ್ನಪ್ಪ ವಡ್ಡಟ್ಟಿ, ಗೋವಿಂದಪ್ಪ ಪೂಜಾರ ಇತರರು ಇದ್ದರು. 


ಸುದ್ದಿ ಓದಿ