ಬಿಜೆಪಿ ಶಾಸಕ ಮನೋಹರ್ ಉಂತ್ವಾಲ್ ನಿಧನ
ಭೋಪಾಲ್, ಜ.30, ಮಧ್ಯಪ್ರದೇಶದ ಪ್ರತಿಪಕ್ಷ ಭಾರತೀಯ ಜನತಾ ಪಕ್ಷದ ಶಾಸಕ ಮನೋಹರ್ ಉಂತ್ವಾಲ್ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು 2018 ರಲ್ಲಿ ಅಗರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮೆದುಳಿನ ರಕ್ತಸ್ರಾವದ ಹಿನ್ನೆಲೆಯಲ್ಲಿ ಶಾಸಕರನ್ನು ಆರಂಭದಲ್ಲಿ ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಬಿಜೆಪಿ ರಾಜ್ಯ ಮಾಧ್ಯಮ ಉಸ್ತುವಾರಿ ಎಲ್. ಪರಾಶರ್ ದೃಢಪಡಿಸಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿದಂತೆ ಹಲವು ಗಣ್ಯರು ಶಾಸಕರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 